ಸುAಟಿಕೊಪ್ಪ, ನ. ೨೯: ಸುಂಟಿಕೊಪ್ಪ ಪೊಲೀಸ್ ಠಾಣೆಯ ನೂತನ ವಸತಿಗೃಹ ಕಟ್ಟಡಕ್ಕೆ ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜ್ ನೆರವೇರಿಸಲಿದ್ದಾರೆ.

ತಾ. ೩೦ರಂದು (ಇಂದು) ಅಪರಾಹ್ನ ೩ ಗಂಟೆಗೆ ಸುಂಟಿಕೊಪ್ಪ ಪೊಲೀಸ್ ಠಾಣಾ ಸಮೀಪದಲ್ಲಿ ಆಯೋಜಿಸಲಾಗಿರುವ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಉಪಸ್ಥಿತಿ, ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ವಿಧಾಸಭಾ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್. ಭೋಜೇಗೌಡ, ಡಾ. ಧನಂಜಯ ಸರ್ಜಿ, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಪಾಲ್ಗೊಳ್ಳಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕ ಡಾ. ಅಲೋಕ್ ಮೋಹನ್, ವ್ಯವಸ್ಥಾಪಕ ನಿzðೆÃಶಕ ಡಾ.ಕೆ. ರಾಮಚಂದ್ರರಾವ್, ಮೈಸೂರು ದಕ್ಷಿಣ ವಲಯ ಪೊಲೀಸ್ ಉಪ ಮಹಾ ನಿರೀಕ್ಷಕ ಡಾ.ಎಂ.ಬಿ. ಬೋರಲಿಂಗಯ್ಯ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ವಿ. ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಪೊಲೀಸ್ ಇಲಾಖೆ ಮುಖ್ಯ ಅಭಿಯಂತರರ ಬಿ.ಎಚ್. ಮಂಜುನಾಥ್, ಮಂಗಳೂರು ವಲಯ ಪ್ರಭಾರ ಕಾರ್ಯನಿರ್ವಾಹಕ ಅಭಿಯಂತರ ರಾಜೇಶ್ ಎಂ. ಆಗಮಿಸಲಿದ್ದಾರೆ.