*ಗೋಣಿಕೊಪ್ಪ, ನ. ೨೯: ಅವಿದ್ಯಾವಂತರಿಗಿAತ ವಿದ್ಯಾವಂತರೇ ಹೆಚ್ಚು ಭ್ರಷ್ಟಾಚಾರಿಗಳಾಗಿದ್ದಾರೆ ಎಂದು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಕೆ. ಬಸವರಾಜು ಅಭಿಪ್ರಾಯ ಪಟ್ಟರು.

ಕಾವೇರಿ ಪದವಿ ಕಾಲೇಜು ಗೋಣಿಕೊಪ್ಪ ರಾಷ್ಟಿçÃಯ ಸೇವಾ ಯೋಜನೆ ಮತ್ತು ಆಂತರಿಕ ಭರವಸೆ ಕೋಶದ ಸಹಯೋಗದಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಯುವಜನತೆ ಭ್ರಷ್ಟಾಚಾರದ ಬಗ್ಗೆ ಜಾಗೃತರಾಗಿ ಇತರರಿಗೂ ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕಿ ಡಾ. ನಯನ ತಮ್ಮಯ್ಯ ಮಾತನಾಡಿ, ಎನ್.ಎಸ್.ಎಸ್ ವಿದ್ಯಾರ್ಥಿಗಳು ಹಳ್ಳಿ-ಹಳ್ಳಿಗಳಲ್ಲಿ ನಗರಗಳಲ್ಲಿ ಜಾಗೃತಿ ಮೂಡಿಸುವ ಮೂಲಕ ಭ್ರಷ್ಟಾಚಾರ ತಡೆಗಟ್ಟಲು ಪ್ರಯತ್ನಿಸಬೇಕು ಎಂದು ತಿಳಿಸಿದರು. ಎನ್.ಎಸ್.ಎಸ್ ಅಧಿಕಾರಿಗಳಾದ ವನಿತ್ ಕುಮಾರ್ ಎಂ.ಎನ್., ರೀತಾ. ಎನ್.ಪಿ. ಕಚೇರಿ ಸಿಬ್ಬಂದಿ ಚನ್ನನಾಯಕ್ ಉಪಸ್ಥಿತರಿದ್ದರು.