ಕುಶಾಲನಗರ: ಕುಶಾಲನಗರ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ನಡೆಯಿತು.
ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಲಾಯಿತು. ಈ ಸಂದರ್ಭ ತಾಲೂಕು ಕಚೇರಿ ಅಧಿಕಾರಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಪೊನ್ನಂಪೇಟೆ: ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭ ಶಿರಸ್ತೆದಾರರಾದ ಟ್ರೇಸ, ರವಿಕುಮಾರ್ ಹಾಗೂ ಸಿಬ್ಬಂದಿ ಹಾಜರಿದ್ದರು.
ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಜ್ಯಶಾಸ್ತç ವಿಭಾಗದ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ. ರಾಘವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಭಾರತ ಸಂವಿಧಾನದ ಪ್ರಸ್ತಾವನೆಯ ಪ್ರತಿಗೆ ಪುಷ್ಪಾರ್ಚನೆ ಮಾಡಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನಂತರ ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿ, ಸಂವಿಧಾನವನ್ನು ರಚಿಸಿದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ರಚನಾ ಸಮಿತಿಯ ಸದಸ್ಯರುಗಳನ್ನು ಹಾಗೂ ಸ್ವಾತಂತ್ರö್ಯ ಹೋರಾಟಗಾರರನ್ನು ನೆನೆಯುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ಪ್ರೊ. ಗಾಯತ್ರಿ ದೇವಿ, ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ. ಇ. ತಿಪ್ಪೇಸ್ವಾಮಿ, ಪ್ರಾಣಿಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ. ಎಂ.ಪಿ. ಕೃಷ್ಣ, ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಮಹದೇವಯ್ಯ, ಹಿಂದಿ ವಿಭಾಗದ ಮುಖ್ಯಸ್ಥ ಬಿ.ಹೆಚ್. ತಳವಾರ್, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಎಂ.ಎನ್. ರವಿಶಂಕರ್, ರಾಜ್ಯಶಾಸ್ತç ಉಪನ್ಯಾಸಕರಾದ ನಿವ್ಯ, ಡೀನ ಹಾಗೂ ಇನ್ನಿತರ ಬೋಧಕ - ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ರಾಜ್ಯಶಾಸ್ತçದ ಉಪನ್ಯಾಸಕರಾದ ಡಾ. ಕೆ.ಎಸ್. ಶೃಂಗಾರ್ ನಿರೂಪಿಸಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಕುರಿತು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ, ಸಂವಿಧಾನದ ಬಗ್ಗೆ ಅರಿವನ್ನು ಮೂಡಿಸಲಾಯಿತು.
ಸೋಮವಾರಪೇಟೆ ಸಂತ ಜೋಸೆಫರ ಕಾಲೇಜು ಸೋಮವಾರಪೇಟೆ: ಸಂವಿಧಾನದ ಆಶಯಗಳನ್ನು ಪ್ರತಿಯೋರ್ವರೂ ಅನುಸರಿಸಬೇಕು ಎಂದು ಇಲ್ಲಿನ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ ಅವರು ಕರೆ ನೀಡಿದರು.
ಸಂತ ಜೋಸೆಫರ ಪದವಿ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೋರ್ವರೂ ಸಂವಿಧಾನದತ್ತವಾಗಿ ಲಭ್ಯವಾಗಿರುವ ಹಕ್ಕುಗಳನ್ನು ಹೊಂದಿಕೊAಡು ಕರ್ತವ್ಯಗಳನ್ನೂ ನಿಭಾಯಿಸಬೇಕು ಎಂದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂಲಕ ರಚನೆಗೊಂಡ ಸಂವಿಧಾನವನ್ನು ದೇಶ ಅಳವಡಿಸಿಕೊಂಡ ಮಹತ್ವದ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಸೋಮವಾರಪೇಟೆ ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ, ಪದವಿ ಕಾಲೇಜಿನ ಪ್ರಾಂಶುಪಾಲ ಬಿ.ಆರ್. ಹರೀಶ್ ಅವರುಗಳು ಉಪಸ್ಥಿತರಿದ್ದರು.