ಚೆಯ್ಯಂಡಾಣೆ, ಡಿ. ೫: ಮಡಿಕೇರಿ ತಾಲೂಕು ಅಂಗನ ವಾಡಿ ಕಾರ್ಯ ಕರ್ತೆಯರ ಮತ್ತು ಸಹಾಯಕಿಯರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷೆ ಸಿ.ಯು. ಪವಿತ್ರ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ನಡೆಯಿತು. ಮಡಿಕೇರಿಯ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷ ಜಿ.ಆರ್. ಶಿವಶಂಕರ್ ಉದ್ಘಾಟಿಸಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಅತಿ ಕಡಿಮೆ ಗೌರವಧನ ಪಡೆದುಕೊಂಡು ಹೆಚ್ಚಿನ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ನಿವೃತ್ತಿ ವೇತನ ಪಿಂಚಣಿ ಹಾಗೂ ಆರೋಗ್ಯ ವಿಮೆ ಯೋಜನೆಯ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರದ ಗಮನ ಸೆಳೆಯಲಾಗಿದೆ ಎಂದರು. ಅಲ್ಲದೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಸರಕಾರಿ ನೌಕರರಾಗಿ ನೇಮಕ ಮಾಡಲು ರಾಜ್ಯಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಮಹಿಳಾ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ಪಾಲ್ಗೊಂಡು ಮಾತನಾಡಿ, ಒಗ್ಗಟ್ಟಿನಲ್ಲಿ ಬಲವಿದೆ ಹಾಗೂ ಸಂಘಟನೆಯಿAದ ಉತ್ತಮ ಕಾರ್ಯಕರ್ತೆ ಸಹಾಯಕಿಯರನ್ನು ಗುರುತಿಸಿ ಸನ್ಮಾನಿಸಿದ್ದು ಶ್ಲಾಘನೀಯ ಎಂದರು.
vಕೊಡಗು ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಸಂವಹನ ಪ್ರಧಾನ ಕಾರ್ಯದರ್ಶಿ ಎಂ.ಎನ್. ರವೂಫ್ ಮಾತನಾಡಿ, ಅಂಗನ ವಾಡಿ ಕಾರ್ಯ ಕರ್ತೆಯರು ಮತ್ತು ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೊಡಗು ಜಿಲ್ಲೆಯ ಇಬ್ಬರು ಶಾಸಕರುಗಳ ಗಮನಕ್ಕೆ ತಂದು ಪರಿಹರಿಸುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಹಾಗೂ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಸೋಮವಾರಪಟೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಧನಲಕ್ಷಿö್ಮ, ಕಾರ್ಯದರ್ಶಿ ತಾರ, ಮಾಜಿ ಜಿಲ್ಲಾಧ್ಯಕ್ಷೆ ತಾರಾಮಣಿ, ಮಾಜಿ ತಾಲೂಕು ಅಧ್ಯಕ್ಷೆö್ಯ ಅಕ್ಕಮ್ಮ, ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹಾಜರಿದ್ದರು. ಸಂಘದ ಕಾರ್ಯದರ್ಶಿ ಆಶಾಲತ ಸ್ವಾಗತಿಸಿ, ವರದಿ ವಾಚಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಕ್ಷೇಮನಿಧಿ ವರದಿಯನ್ನು ಕ್ಷೇಮನಿಧಿ ಕಾರ್ಯದರ್ಶಿ ಮೇನಕ ಮಂಡಿಸಿದರು. ಉಷಾ ಪ್ರಾರ್ಥಿಸಿ, ಸುಮತಿ ವಂದಿಸಿದರು.