ಪೊನ್ನAಪೇಟೆ, ಡಿ.೫: ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೈಯರ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಮೂರು ಗ್ರಾ. ಪಂ. ವ್ಯಾಪ್ತಿಯ ಕೊಡವ ಕೌಟುಂಬಿಕ ೩ನೇ ವರ್ಷದ ಹಾಕಿ ಪಂದ್ಯಾವಳಿಯು ತಾ. ೬ ರಿಂದ (ಇಂದಿನಿAದ) ಆರಂಭಗೊಳ್ಳಲಿದೆ. ವಿ. ಬಾಡಗದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು ೫ ದಿನಗಳ ಕಾಲ ನಡೆಯಲಿರುವ ಈ ಹಾಕಿ ಪಂದ್ಯಾವಳಿಗಾಗಿ ಈಗಾಗಲೇ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿರುವುದಾಗಿ ವಿ. ಬಾಡಗ ಹೈಪ್ಲೈಯರ್ಸ್ ಸಂಸ್ಥೆಯ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ತಿಳಿಸಿದ್ದಾರೆ.

ದ. ಕೊಡಗಿನ ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್‌ಮನೆ ಹೊಂದಿರುವ ಕೊಡವ ಕುಟುಂಬ ತಂಡಗಳಿಗಾಗಿ ಆಯೋಜಿಸಲಾಗಿರುವ ಈ ಹಾಕಿ ಪಂದ್ಯಾವಳಿಯಲ್ಲಿ ವಿವಿಧ ಅತಿಥಿ ಆಟಗಾರರನ್ನು ಒಳಗೊಂಡ ಒಟ್ಟು ೨೦ ಕುಟುಂಬ ತಂಡಗಳು ಭಾಗವಹಿಸುತ್ತಿದ್ದು, ಚಾಂಪಿಯನ್ ಪಟ್ಟಕ್ಕಾಗಿ ಸೆಣೆಸಾಡಲಿವೆ.

ಬೆಳಿಗ್ಗೆ ಜರುಗಲಿರುವ ಕಾರ್ಯಕ್ರಮದಲ್ಲಿ ಮಾಜಿ ಅಂತರರಾಷ್ಟಿçÃಯ ಹಾಕಿ ಪಟು, ಒಲಂಪಿಯನ್ ಚೆಪ್ಪುಡಿರ ಪೂಣಚ್ಚ ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ. ಹೈಪ್ಲೆöÊಯರ್ಸ್ ಸಂಸ್ಥೆಯ ಸಲಹಾ ಸಮಿತಿ ಅಧ್ಯಕ್ಷ ಮಳವಂಡ ಗಿರೀಶ್ ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ವೀರಾಜಪೇಟೆ ಪೊಲೀಸ್ ವೃತ್ತ ನಿರೀಕ್ಷಕ ಪೆಮ್ಮಚಂಡ ಅನೂಪ್ ಮಾದಪ್ಪ, ರಾಜ್ಯ ತಂಡದ ಮಾಜಿ ಹಾಕಿ ಆಟಗಾರರಾದ ಕಂಬೀರAಡ ಶಾರದಾ ಅಯ್ಯಪ್ಪ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಹಾಕಿ ಕೂರ್ಗ್ ಸಂಸ್ಥೆಯ ಅಧ್ಯಕ್ಷ ಪಳಂಗAಡ ಲವಕುಮಾರ್, ವಿ. ಬಾಡಗ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಂಜಿತAಡ ಗಿಣಿ ಮೊಣ್ಣಪ್ಪ, ವಿ.ಬಾಡಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕೆ.ಸಿ. ಗೀತಾಂಜಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಮ್ಮಣಿಚಂಡ ರಂಜು ಪೂಣಚ್ಚ ಮಾಹಿತಿ ನೀಡಿದ್ದಾರೆ.

ಪಂದ್ಯಾವಳಿಯನ್ನು ವ್ಯವಸ್ಥಿತವಾಗಿ ಮತ್ತು ಶಿಸ್ತುಬದ್ಧವಾಗಿ ನಡೆಸಲು ಈಗಾಗಲೇ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಾಕಿ ಕೂರ್ಗ್ ಸಂಸ್ಥೆಯ ತೀರ್ಪುಗಾರರು ಪಂದ್ಯಾವಳಿಯನ್ನು ನಡೆಸಿಕೊಡಲಿದ್ದಾರೆ. ವಿಶೇಷವಾಗಿ ಪಂದ್ಯಾವಳಿಯ ವಿನ್ನರ್ಸ್, ರನ್ನರ್ಸ್ ಮತ್ತು ತೃತೀಯ ಸ್ಥಾನ ವಿಜೇತ ತಂಡಗಳಿಗೆ ನಗದು ಬಹುಮಾನದೊಂದಿಗೆ ಕಳೆದ ಬಾರಿಯಂತೆ ಬೆಳ್ಳಿಯ ಟ್ರೋಫಿಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ಕ್ರೀಡಾ ಸಮಿತಿಯ ಅಧ್ಯಕ್ಷÀ ಕುಪ್ಪಂಡ ದಿಲನ್ ಬೋಪಣ್ಣ ತಿಳಿಸಿದ್ದಾರೆ.

-ರಫೀಕ್ ತೂಚಮಕೇರಿ