ಮಡಿಕೇರಿ, ಡಿ. ೫: ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ಬೆಳ್ಳಿ ಹಬ್ಬದ ಪ್ರಯುಕ್ತ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ರೈತ ಮೇಳ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅರಣ್ಯ ಕಾಲೇಜಿನ ವಿದ್ಯಾರ್ಥಿಗಳನ್ನು ಒಳಗೊಂಡAತೆ ಕಾವೇರಿ ಕಾಲೇಜು, ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ನ ವಿದ್ಯಾರ್ಥಿ ಗಳು ನಲ್ಲೂರು ಗ್ರಾಮದ ಪ್ರಗತಿಪರ ರೈತ ಸೋಮೇಂಗಡ ತಿಮ್ಮಯ್ಯ ಅವರ ಜಮೀನಿಗೆ ಭೇಟಿ ನೀಡಿ ಆಧುನಿಕ ಕೃಷಿ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ಸಂದರ್ಭ ಅರಣ್ಯ ಕಾಲೇಜಿನ ಪ್ರಾಧ್ಯಾಪಕ ಜಡೆಗೌಡ ಹಾಜರಿದ್ದರು. ಭತ್ತ, ಕಾಫಿ ಬೆಳೆಗಳ ಬಗ್ಗೆ, ಜೇನು ಸಾಕಾಣಿಕ, ಮೀನುಗಾರಿಕೆ, ಜಾನುವಾರು ಸಾಕಾಣಿಕೆ, ಬಿದಿರು ಬೆಳೆ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಪಡೆದುಕೊಂಡರು.