ಗೋಣಿಕೊಪ್ಪಲು, ಡಿ. ೫: ವಿಶೇಷಚೇತನ ಮಕ್ಕಳು ದಿನಪೂರ್ತಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಸೂಸುವಲ್ಲಿ ಯಶಸ್ವಿಯಾದರು. ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ವಿಶೇಷಚೇತನರು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ನಾವು ಕೂಡ ಯಾರಿಗೂ ಕಡಿಮೆ ಇಲ್ಲ ಎಂಬAತೆ ಪ್ರದರ್ಶನವನ್ನು ತೋರಿದರು.

ಗೋಣಿಕೊಪ್ಪಲುವಿನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶೇಷಚೇತನರಿಗೆ ೧೦೦ ಮೀ. ಓಟ, ಡ್ರಾಪ್ ಡೌನ್ ದ ಕಪ್, ಪೇಪರ್ ಕಪ್ ಸ್ಟಾಕಿಂಗ್, ಸಂಗೀತ ಕುರ್ಚಿ, ಬಕೆಟ್‌ಗೆ ಹೊಡೆಯುವುದು, ಗಾಯನ ಸ್ಪರ್ಧೆ, ಬಾಂಬ್ ಇನ್ ದ ಸಿಟಿ ಸೇರಿದಂತೆ ೧೫ಕ್ಕೂ ಹೆಚ್ಚಿನ ಕ್ರೀಡೆಗಳು ನಡೆದವು. ಮುಂಜಾನೆಯಿAದ ಸಂಜೆಯವರೆಗೂ ನಡೆದ ವಿವಿಧ ಕ್ರೀಡೆಗಳಲ್ಲಿ ವಿಶೇಷಚೇತನರು ಆಸಕ್ತಿ ವಹಿಸಿ ಪಾಲ್ಗೊಂಡರು.

ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಎಂ. ಮಂಜುಳ ಅಧ್ಯಕ್ಷತೆಯಲ್ಲಿ ನಡೆದ ಕ್ರೀಡೋತ್ಸವದಲ್ಲಿ ಪಾಲಿಬೆಟ್ಟ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ನ ಅಧ್ಯಕ್ಷೆ ಗೀತಾ ಚಂಗಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕ್ರೀಡೋತ್ಸವಕ್ಕೆ ಹಲವು ಸಂಘ-ಸAಸ್ಥೆಗಳು ಸಹಕಾರ ನೀಡಿರುವುದು ಶ್ಲಾಘನೀಯ, ಎಲ್ಲ್ಲರು ಒಟ್ಟಾಗಿ ಸೇರಿ ವಿಶೇಷಚೇತನರ ಮಕ್ಕಳೊಂದಿಗೆ ಬೆರೆಯುತ್ತಿರುವುದು ಆಶಾದಾಯಕ ಬೆಳವಣಿಗೆ. ಸಮಾಜದಲ್ಲಿ ಸಮಾನ ಅವಕಾಶ ನೀಡುವ ನಿಟ್ಟಿನಲ್ಲಿ ಕ್ರೀಡಾಕೂಟವು ನಡೆಸುತ್ತಿರುವುದರಿಂದ ಮಕ್ಕಳಲ್ಲಿನ ಪ್ರತಿಭೆಗಳಿಗೆ ಉತ್ತಮ ವೇದಿಕೆ ನಿರ್ಮಾಣ ಮಾಡಲಾಗಿದೆ ಎಂದು ಅಧ್ಯಕ್ಷೆ ಗೀತಾ ಚಂಗಪ್ಪ ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸ್ವಾಮಿ ವಿವೇಕಾನಂದ ಸಂಸ್ಥೆಯ ಖಜಾಂಚಿ ಡಾ. ಚಂದ್ರಶೇಖರ್ ಮಾತನಾಡಿ, ಎಲ್ಲಾ ಕಾರ್ಯಕ್ರಮದಲ್ಲಿಯೂ ಸಮಯಕ್ಕೆ ಮೊದಲ ಆದ್ಯತೆ ನೀಡಬೇಕು. ನಿಗದಿತ ಸಮಯದಲ್ಲಿ ಕಾರ್ಯಕ್ರಮಗಳು ಆರಂಭವಾಗಬೇಕು. ಇದರಿಂದ ಮಕ್ಕಳಿಗೆ ಸಮಯ ಪ್ರಜ್ಞೆ ಮೂಡಿಸಲು ಅವಕಾಶವಾಗಲಿದೆ. ಸಮಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪ್ರತಿ ಕಾರ್ಯಕ್ರಮದಲ್ಲಿ ಆಯೋಜಕರು ಸಮಯ ಪ್ರಜ್ಞೆಯನ್ನು ಮನಸಿನಲ್ಲಿಟ್ಟುಕೊಂಡು ಕಾರ್ಯಕ್ರಮವನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.

ಮತ್ತೋರ್ವ ಅತಿಥಿ ಪೊನ್ನಂಪೇಟೆ ತಾಲೂಕು ಸಿಡಿಪಿಒ ಪೂಣಚ್ಚ ಮಾತನಾಡಿ, ವರ್ಷಂಪ್ರತಿ ವಿಶೇಷಚೇತನರಿಗೆ ಕ್ರೀಡೋತ್ಸವ ಆಯೋಜಿಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಎಲ್ಲರಿಗೂ ಭಾಗವಹಿಸಲು ಅವಕಾಶ ಲಭ್ಯವಿರದ ಹಿನ್ನಲೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರತಿ ಮಗುವಿಗೂ ಪಾಲ್ಗೊಳ್ಳುವ ನಿಟ್ಟಿನಲ್ಲಿ ಈ ಕ್ರೀಡೆಯನ್ನು ತಾಲೂಕು ಮಟ್ಟದಲ್ಲಿ ಆಯೋಜಿಸಲಾಗಿದೆ. ಇಲ್ಲಿ ವಿಜೇತರಾದವರನ್ನು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಎಂ. ಮಂಜುಳ ಮಾತನಾಡಿ, ವಿವಿಧ ಸಂಘ-ಸAಸ್ಥೆಗಳು ವಿಶೇಷಚೇತನರ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು. ಇಂತಹ ಮಕ್ಕಳಿಗೆ ವೇದಿಕೆಗಳು ಆಗಿಂದ್ದಾಗಿಯೆ ಸಿಗುವಂತಾಗಬೇಕು. ಇದರಿಂದ ಇವರಲ್ಲಿನ ಪ್ರತಿಭೆಗಳನ್ನು ಹೊರಸೂಸಲು ಅವಕಾಶ ನೀಡಿದಂತಾಗುತ್ತದೆ ಎಂದರು.

ವೇದಿಕೆಯಲ್ಲಿ ಸ್ತಿçÃಶಕ್ತಿ ಒಕ್ಕೂಟದ ಅಧ್ಯಕ್ಷರಾದ ರಜನಿ, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮಹೇಶ್, ಗೋಣಿಕೊಪ್ಪ ಗ್ರಾ.ಪಂ. ಸದಸ್ಯರಾದ ಕೊಣಿಯಂಡ ಬೋಜಮ್ಮ, ರತಿ ಅಚ್ಚಪ್ಪ ಅಂಗನವಾಡಿ ಸಂಘದ ಅಧ್ಯಕ್ಷೆ ಸುಮಿತ್ರ, ಸಹಾಯಕ ಅಭಿವೃದ್ಧಿ ಅಧಿಕಾರಿ ರೀಟಾ ಸೇರಿದಂತೆ ಇನ್ನಿತರ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಆರ್‌ಡಬ್ಲೂö್ಯ ಶಾಂತಿ, ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ನ ವಿಶೇಷ ಶಿಕ್ಷಕಿ ಶಂಸಿದ ಸ್ವಾಗತಿಸಿ, ಮುಖ್ಯ ಶಿಕ್ಷಕ ಶಿವರಾಜ್ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು. ಅಂಗನವಾಡಿ ಕಾರ್ಯಕರ್ತರು, ಎಂಆರ್‌ಡಬ್ಲೂö್ಯ, ವಿಆರ್‌ಡಬ್ಲೂö್ಯನ ಪ್ರಮುಖರು ವಿವಿಧ ಶಾಲೆಯಿಂದ ಆಗಮಿಸಿದ ಶಿಕ್ಷಕ, ಶಿಕ್ಷಕಿಯರು ಸೇರಿದಂತೆ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸುಡು ಬಿಸಿಲನ್ನು ಲೆಕ್ಕಿಸದೆ ವಿಶೇಷಚೇತನರು ಕ್ರೀಡಾಕೂಟದಲ್ಲಿ ಭಾಗವಹಿಸಿ ಗಮನ ಸೆಳೆದರು. ವಿಜೇತರಿಗೆ ಗೋಣಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಬಹುಮಾನ ನೀಡಲಾಯಿತು. ಕಾರ್ಯಕ್ರಮದ ಯಶಸ್ವಿಗೆ ಸತ್ಯಸಾಯಿ ಸೇವಾಟ್ರಸ್ಟ್, ವಿವೇಕಾನಂದ ಯೂಥ್ ಮೂವ್‌ಮೆಂಟ್, ಗೋಣಿಕೊಪ್ಪ ಗ್ರಾಮ ಪಂಚಾಯಿತಿ, ಅಂಗನವಾಡಿ ನೌಕರರ ಸಂಘ, ಸ್ತಿçÃಶಕ್ತಿ ಒಕ್ಕೂಟ ಚೆಶೈರ್ ಹೋಮ್ ಪಾಲಿಬೆಟ್ಟ ಸೇರಿದಂತೆ ಇನ್ನಿತರ ಸಂಘ-ಸAಸ್ಥೆಗಳು ಸಹಕಾರ ನೀಡಿದವು. -ಹೆಚ್.ಕೆ.ಜಗದೀಶ್