ಮಡಿಕೇರಿ, ಡಿ. ೫: ನಗರದ ಶ್ರೀ ರಾಜೇಶ್ವರಿ ವಿದ್ಯಾಲಯದಲ್ಲಿ ವಿಜ್ಞಾನ ಮತ್ತು ಇತಿಹಾಸ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಮಡಿಕೇರಿಯ ಪೊಲೀಸ್ ಉಪ ಅಧೀಕ್ಷಕ ರವಿ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷ ಗೋವಿಂದ ರಾಜ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಮುಖ್ಯೋಪಾಧ್ಯಾಯಿನಿ ಶಶಿಕಲಾ, ವಿದ್ಯಾಸಂಸ್ಥೆಯ ಉಪಾಧ್ಯಕ್ಷೆ ದಾಕ್ಷಾಯಿಣಿ ವಾಸುದೇವ್, ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಚಿನ್ ವಾಸುದೇವ್, ನಿರ್ದೇಶಕ ದೇವರಾಜ್, ಪ್ರಾಂಶುಪಾಲ ಮಂದಣ್ಣ ಪಾಲ್ಗೊಂಡಿದ್ದರು.

ವಿದ್ಯಾಸAಸ್ಥೆಯ ವಿದ್ಯಾರ್ಥಿಗಳು ವಿಜ್ಞಾನ ಮತ್ತು ಇತಿಹಾಸ ವಿಷಯಕ್ಕೆ ಸಂಬAಧಿಸಿದAತೆ ಸೃಜನಾತ್ಮಕ ವಿವಿಧ ಮಾದರಿಗಳನ್ನು ತಯಾರಿಸಿ ಗಮನ ಸೆಳೆದರು.