ಕೂಡಿಗೆ, ಜ. ೯: ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಕುಶಾಲನಗರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.
ಮಾಜಿ ಮುಖ್ಯ ಮಂತ್ರಿ ವೀರೇಂದ್ರ ಪಾಟೀಲ್ ಅವರ ಜನ್ಮ ಶತಮಾನೋತ್ಸವ ಹಾಗೂ ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರ ನುಡಿ ನಮನ ಕಾರ್ಯಕ್ರಮಕ್ಕೆ ಅಗಮಿಸುವಂತೆ ಶಾಸಕರ ನೇತೃತ್ವದಲ್ಲಿ ಭೇಟಿ ಮಾಡಿ ಆಹ್ವಾನ ಸಲ್ಲಿಸಿದರು. ನಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸುರಾಜ್ ಅವರನ್ನು ಭೇಟಿ ಮಾಡಿ ಕಾರ್ಯ ಕ್ರಮಕ್ಕೆ ಆಹ್ವಾನ ನೀಡಲಾಯಿತು.
ಈ ಸಂದರ್ಭದಲ್ಲಿ ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಬಳಗದ ಪ್ರಮುಖರಾದ ಕೆ.ಕೆ. ನಾಗರಾಜಶೆಟ್ಟ, ಟಿ.ಕೆ. ಪಾಂಡುರAಗ, ಬಿ.ಡಿ. ಅಣ್ಣಯ್ಯ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.