ಶಂಭುಲಿAಗಪ್ಪ
ಶನಿವಾರಸAತೆ, ಜ. ೯: ಕೊಡ್ಲಿಪೇಟೆ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಾ ಕಲಿಕಾ ಪ್ರಗತಿಯೊಂದಿಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲೂ ಖ್ಯಾತಿ ಪಡೆಯುತ್ತಿದೆ. ಮಕ್ಕಳ ಕಲಿಕೆಯ ಬಗ್ಗೆ ಪೋಷಕರು ಹೆಚ್ಚಿನ ಗಮನ ಹರಿಸಬೇಕು ಎಂದು ಸಂಸ್ಥೆಯ ಉಪಾಧ್ಯಕ್ಷ ಶಂಭುಲಿAಗಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ೨೦೨೪-೨೫ ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆ ಕಾರ್ಯದರ್ಶಿ ಪರಮೇಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕ ವೆಂಕಟ ನಾಯಕ್ ಸಮಾರೋಪ ಭಾಷಣ ಮಾಡಿ, ಸಂಸ್ಥೆಯ ಅಧ್ಯಕ್ಷ ಹಾಗೂ ವಕೀಲ ಚಂದ್ರಮೌಳಿ ಅವರ ಸೇವೆಯನ್ನು ಶ್ಲಾಘಿಸಿದರು.
ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಉಚಿತವಾಗಿ ಶೂ ಮತ್ತು ಸಾಕ್ಸ್ ನೀಡುತ್ತಿರುವ ಶಾಲೆಯ ಹಳೆಯ ವಿದ್ಯಾರ್ಥಿನಿ ಬೆಂಗಳೂರಿನ ಆಟೋಸ್ ಗ್ಲೋಬಲ್ ಆರ್ಕಿಟೆಕ್ಟ್ ಅನಿತಾ ರಾಘವೇಂದ್ರ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
ಸAಸ್ಥೆಯ ಖಜಾಂಚಿ ಡಾ. ಉದಯಕುಮಾರ್, ನಿರ್ದೇಶಕ ಸಿ.ಟಿ. ನಾಗರಾಜ್, ಆಡಳಿತಾಧಿಕಾರಿ ಜಗದೀಶ್ ಬಾಬು, ಪ್ರೌಢಶಾಲಾ ಮುಖ್ಯಶಿಕ್ಷಕ ಅಬ್ದುಲ್ ರಬ್, ಪಿಯು ಕಾಲೇಜು ಪ್ರಾಂಶುಪಾಲ ಪವಾರ್, ಪದವಿ ಕಾಲೇಜಿನ ಪ್ರಾಂಶುಪಾಲ ನಿರಂಜನ್, ಕೊಡ್ಲಿಪೇಟೆ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ರವೀಶ್, ಬೆಸೂರು ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ಮುರಳಿಧರ್, ನೀರುಗುಂದ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಹಾಗೂ ನೌಕರರ ಸಂಘದ ನಿರ್ದೇಶಕ ಸುರೇಶ್, ಉಪನ್ಯಾಸಕ ಅಭಿಲಾಶ್, ಹೆಬ್ಬಾಲೆ ಉಮೇಶ್, ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿ ಹಾಜರಿದ್ದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು.