ಕೂಡಿಗೆ, ಜ. ೧೦: ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಾರ್ಷಿಕೋತ್ಸವ ತಾ. ೧೧ರಂದು (ಇಂದು) ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ. ಡಾ. ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ ವಹಿಸಲಿದ್ದು, ಮುಖ್ಯ ಭಾಷಣಕಾರರಾಗಿ ಜಾನಪದ ಪರಿಷತ್ತು ಜಿಲ್ಲಾ ಅಧ್ಯಕ್ಷ ಬಿ.ಜಿ. ಅನಂತಶಯನ, ಮುಖ್ಯ ಅತಿಥಿಗಳಾಗಿ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್ ಕುಮಾರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪಿ.ವಿ. ಕವಿತ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್. ಹೂನ್ನೇಗೌಡ, ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಭಾಗ್ಯಮ್ಮ, ಜಿಲ್ಲಾ ಸಮನ್ವಯಾಧಿಕಾರಿ ಲೋಕೇಶ್, ಚಂದ್ರಶೇಖರ್ ರೆಡ್ಡಿ ಸೇರಿದಂತೆ ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರು ಆಗಮಿಸಲಿದ್ದಾರೆ ಎಂದು ಶಾಲಾ ಸಮಿತಿಯವರು ತಿಳಿಸಿದ್ದಾರೆ.