ಚೆಯ್ಯಂಡಾಣೆ, ಜ. ೨೩: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಫಿ ಕೊಯ್ಲು ಕೆಲಸ ಭರದಿಂದ ಸಾಗುತ್ತಿದ್ದು, ರಾಜ್ಯ ಹಾಗೂ ಹೊರ ರಾಜ್ಯದ ಕಾರ್ಮಿಕರು ಅಧಿಕ ಸಂಖ್ಯೆಯಲ್ಲಿ ಪಂಚಾಯಿತಿ ವ್ಯಾಪ್ತಿಯ ಬೆಳೆಗಾರರ ತೋಟದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬೆಳೆಗಾರರ ತೋಟಗಳಿಂದ ಬೆಳೆದ ಕಾಫಿ, ಕಾಳುಮೆಣಸು ಸೇರಿದಂತೆ ಇನ್ನಿತರ ಬೆಳೆಗಳನ್ನು ಕಾರ್ಮಿಕರು ಕಳ್ಳತನ ಮಾಡಿ ಅಂಗಡಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಂಗಡಿಗಳ ವರ್ತಕರು ಎಚ್ಚರಿಕೆ ವಹಿಸಿ ಕಾರ್ಮಿಕರಿಂದ ವಸ್ತುಗಳನ್ನು ಖರೀದಿಸಬೇಕು.

ಯಾವುದೇ ಅನುಮಾನ ಬಂದರೆ ಕೂಡಲೇ ಗ್ರಾಮ ಪಂಚಾಯಿತಿ ಅಥವಾ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ನರಿಯಂದಡ ಗ್ರಾ.ಪಂ. ತಿಳಿಸಿದೆ.