ಮಡಿಕೇರಿ, ಫೆ. ೧: ಕಟ್ಟೆಮಾಡು ಗ್ರಾಮದ ಶ್ರೀ ಮೃತ್ಯುಂಜಯ ದೇವಸ್ಥಾನದ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ತಾ. ೨೭ರಂದು ಸಂಜೆ ಹಲ್ಲೆ ಮಾಡಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವೀರಾಜಪೇಟೆ ನಾಲ್ಕೇರಿ ಗ್ರಾಮದ ಎಂ.ಬಿ. ಅಯ್ಯಪ್ಪ ಅಲಿಯಾಸ್ ಅನಿಲ್ (೪೬), ಎಂ.ಪಿ. ಕಾಳಪ್ಪ (೫೧) ಮತ್ತು ಟಿ.ಎಲ್. ಸುಬ್ಬಯ್ಯ ಅಲಿಯಾಸ್ ಸುನಿ (೪೭) ಎಂಬವರನ್ನು ಬಂದಿಸಲಾಗಿದೆ.

ಆರೋಪಿಗಳ ಪತ್ತೆಗಾಗಿ ಮಡಿಕೇರಿ ಉಪ ವಿಭಾಗದ ಡಿ.ಎಸ್.ಪಿ. ಸೂರಜ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಹೆಚ್.ವಿ. ಚಂದ್ರಶೇಖರ್ ಮತ್ತು ಠಾಣಾಧಿಕಾರಿ ಶ್ರೀನಿವಾಸ್, ಮಡಿಕೇರಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಎನ್.ಟಿ. ತಮ್ಮಯ್ಯ, ಉಪವಿಭಾಗ ಮಟ್ಟದ ಅಪರಾಧ ಪತ್ತೆದಳ, ಡಿ.ಸಿ.ಆರ್.ಬಿ. ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತನಿಖಾ ತಂಡ ತನಿಖೆ ಕೈಗೊಂಡು ಇಂದು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರತಿಭಟನೆ ಹಿಂಪಡೆತ

ಹಲ್ಲೆ ಆರೋಪಿಗಳನ್ನು ಬಂಧಿಸುವAತೆ ಒತ್ತಾಯಿಸಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಆರೋಪಿಗಳ ಬಂಧನದ ಹಿನ್ನೆಲೆಯಲ್ಲಿ ಹಿಂಪಡೆದಿರುವುದಾಗಿ ನಿಧಿ ಅಧ್ಯಕ್ಷ ರಾಮಚಂದ್ರ ಮೂಗೂರು ತಿಳಿಸಿದ್ದಾರೆ.