ಕೂಡಿಗೆ, ಫೆ. ೧: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯ ಮುಂಭಾಗದಲ್ಲಿ ಅಣೆಕಟ್ಟೆಯಿಂದ ನದಿಗೆ ನೀರು ಧುಮ್ಮುಕ್ಕುವ ದೃಶ್ಯವನ್ನು ಪ್ರವಾಸಿಗರು ವೀಕ್ಷಣೆ ಮಾಡಲು ಅವಕಾಶ ಕಲ್ಪಿಸುವ ಹಿತದೃಷ್ಟಿಯಿಂದ ನೂತನ ತಂತ್ರಜ್ಞಾನದ ಮೂಲಕ ಪ್ರಥಮವಾಗಿ ಹಾರಂಗಿಯಲ್ಲಿ ಕಮಾನು ಮಾದರಿಯ ತೂಗುಸೇತುವೆ ನಿರ್ಮಾಣಕ್ಕೆ ರೂ.೩೬ ಕೋಟಿ ಹಣ ಬಿಡುಗಡೆಗೊಂಡಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.

ಮಳೆಗಾಲದಲ್ಲಿ ಅಣೆಕಟ್ಟೆಯು ಸಂಪೂರ್ಣವಾಗಿ ಭರ್ತಿಯಾದ ಸಂದರ್ಭದಲ್ಲಿ ಹೆಚ್ಚುವರಿಯಾದ ನೀರನ್ನು ಅಣೆಕಟ್ಟೆಯ ನಾಲ್ಕು ಕ್ರಸ್ಟ್ ಗೇಟ್‌ಗಳ ಮೂಲಕ ನೀರನ್ನು ನದಿಗೆ ಹರಿಯಬಿಡುವ ಮನಮೋಹಕವಾದ ದೃಶ್ಯವನ್ನು ಹಾರಂಗಿಗೆ ಅಗಮಿಸುವ ಪ್ರವಾಸಿಗರು ವೀಕ್ಷಣೆ ಮಾಡಲು ಅನುಕೂಲವಾಗುವಂತೆ ಕಾವೇರಿ ನೀರಾವರಿ ನಿಗಮ ಮತ್ತು ಹಾರಂಗಿಗೆ ಅಗಮಿಸುವ ಪ್ರವಾಸಿಗರ ಬಹು ದಿನಗಳ ಬೇಡಿಕೆಯಂತೆ ರಾಜ್ಯ ಸರಕಾರ ಕಾವೇರಿ ನೀರಾವರಿ ನಿಗಮದ ಮೂಲಕ ರೂ. ೩೬ ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಅಧುನಿಕ ತಂತ್ರಜ್ಞಾನದ ಅಡಿಯಲ್ಲಿ ನೀರಾವರಿ ಇಲಾಖೆಯ ನಿಯಮಾನುಸಾರ ಪ್ರವಾಸಿಗರಿಗೆ ಅನುಕೂಲವಾಗುವಂತೆ ತೂಗು ಸೇತುವೆಯ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ. ಬಹುದಿನಗಳ ಪ್ರವಾಸಿಗರ ಬೇಡಿಕೆಯಂತೆ ಮತ್ತು ಸಾರ್ವಜನಿಕರ ೩ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಮನವಿಯನ್ನು ರಾಜ್ಯಮಟ್ಟದ ಕಾವೇರಿ ನೀರಾವರಿ ನಿಗಮಕ್ಕೆ ಕಳುಹಿಸಲಾಗಿತ್ತು. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಮಾರ್ಗದರ್ಶನದಲ್ಲಿ ತೂಗು ಸೇತುವೆಗೆ ಕ್ರಿಯಾ ಯೋಜನೆಗೆ ಸಂಬAಧಿಸಿದAತೆ ಪ್ರಸ್ತಾವನೆ ನೀರಾವರಿ ಇಲಾಖೆಯ ಮೂಲಕ ಕೈಗೊಳ್ಳಲಾಗಿತ್ತು. ಅದರಂತೆ ನಿಗಮದ ಮೂಲಕ ಕ್ರಿಯಾ ಯೋಜನೆ ಅನುಮೋದನೆಗೊಂಡಿದ್ದು ಮುಂದಿನ ದಿನಗಳಲ್ಲಿ ತೂಗು ಸೇತುವೆ ನಿರ್ಮಾಣದ ಕಾಮಗಾರಿಯು ಶಾಸಕ ಮಂತರ್ ಗೌಡ ಅವರ ಸೂಚನೆಯಂತೆ ನಡೆಯಲಿದೆ. ಅಲ್ಲದೆ ಈಗಾಗಲೇ ಅಣೆಕಟ್ಟೆ ಮುಂಭಾಗದಲ್ಲಿ ಪ್ರವಾಸಿಗರಿಗೆ ವೀಕ್ಷಣೆಗೆ ಅನುಕೂಲ ಕಲ್ಪಿಸುವ ಹಿತದೃಷ್ಟಿಯಿಂದ ಬೃಂದಾವನ ಮತ್ತು ಸಂಜೆಯ ವೇಳೆಯಲ್ಲಿ ಸಂಗೀತ ಕಾರಂಜಿಯ ಜೊತೆಯಲ್ಲಿ ಅಣೆಕಟ್ಟೆಯಿಂದ ಹೆಚ್ಚುವರಿಯಾಗಿ ನೀರು ನದಿಗೆ ಹರಿಸುವ ದೃಶ್ಯವನ್ನು ಪ್ರವಾಸಿಗರು ವೀಕ್ಷಣೆ ಮಾಡಲು ಅನುಕೂಲವಾಗುವುದು ಎಂದು ಕಾರ್ಯಪಾಲಕ ಅಭಿಯಂತರ ಐ.ಕೆ. ಪುಟ್ಟಸ್ವಾಮಿ ತಿಳಿಸಿದ್ದಾರೆ. -ಕೆ.ಕೆ. ನಾಗರಾಜಶೆಟ್ಟಿ