ಶನಿವಾರಸAತೆ, ಫೆ. ೨: ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಕೊಡುಗೆ ಅಪಾರ ಎಂದು ಶ್ರೀಕ್ಷೇ ತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕಿ ಲೀಲಾವತಿ ಅಭಿಪ್ರಾಯ ವ್ಯಕ್ತಪಡಿಸಿದರು.

ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಶ್ರೀಬಸವೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಮಂಜೂರು ಮಾಡಿದ ರೂ.೧ ಲಕ್ಷ ಮೌಲ್ಯದ ಸಹಾಯಧನದ ಡಿ.ಡಿ.ಯನ್ನು ವಿತರಿಸಿ ಅವರು ಮಾತನಾಡಿದರು.

ಶ್ರೀಕ್ಷೇತ್ರ ಧರ್ಮಸ್ಥಳದ ಮೂಲಕ ಸರ್ಕಾರಿ ಶಾಲೆಗಳಿಗೆ ಬೆಂಚ್-ಡೆಸ್ಕ್ ವಿತರಣೆ, ಜ್ಞಾನದೀಪ ಶಿಕ್ಷಕರ ನೇಮಕ, ಕೆರೆ ಅಭಿವೃದ್ಧಿ, ಹಾಲಿನ ಡೈರಿ ಅಭಿವೃದ್ಧಿ, ಸಮುದಾಯ ಭವನ, ದೇವಸ್ಥಾನಗಳ ಅಭಿವೃದ್ಧಿಗೆ ಪ್ರತಿ ವರ್ಷ ನೂರಾರು ಕೋಟಿ ಸಹಾಯಧನ ಕೊಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಸಹಕರಿಸುತ್ತಿದ್ದಾರೆ ಎಂದರು.

ಕೊಡ್ಲಿಪೇಟೆ ವಿ.ಎಸ್.ಎಸ್.ಎನ್. ಬ್ಯಾಂಕಿನ ನಿರ್ದೇಶಕ ಬಿ.ಕೆ.ಯತೀಶ್ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಕಳೆದ ೪೦ ವರ್ಷಗಳಿಂದ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಸಮಾಜದಲ್ಲಿ ಉತ್ತಮ ಪರಿವರ್ತನೆ ಆಗುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ರೋಹಿತ್, ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ನಾಗರಾಜ್, ದೇವಸ್ಥಾನ ಸಮಿತಿ ಅಧ್ಯಕ್ಷ ಶಾಂತಮಲ್ಲಪ್ಪ, ಮುಖಂಡ ಫಾಲಾಕ್ಷ, ಸೇವಾ ಪ್ರತಿನಿಧಿ ಫಾತಿಮಾ, ಇತರರು ಹಾಜರಿದ್ದರು. ಮೇಲ್ವಿಚಾರಕ ನಾಗರಾಜ್ ನಿರೂಪಿಸಿ, ವಂದಿಸಿದರು. ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಕಳೆದ ೪೦ ವರ್ಷಗಳಿಂದ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಸಮಾಜದಲ್ಲಿ ಉತ್ತಮ ಪರಿವರ್ತನೆ ಆಗುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ರೋಹಿತ್, ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ನಾಗರಾಜ್, ದೇವಸ್ಥಾನ ಸಮಿತಿ ಅಧ್ಯಕ್ಷ ಶಾಂತಮಲ್ಲಪ್ಪ, ಮುಖಂಡ ಫಾಲಾಕ್ಷ, ಸೇವಾ ಪ್ರತಿನಿಧಿ ಫಾತಿಮಾ, ಇತರರು ಹಾಜರಿದ್ದರು. ಮೇಲ್ವಿಚಾರಕ ನಾಗರಾಜ್ ನಿರೂಪಿಸಿ, ವಂದಿಸಿದರು.