ಮಡಿಕೇರಿ, ಫೆ. ೨: ಕ್ಷಿಪ್ರಗತಿಯಲ್ಲಿ ಬೆಳವಣಿಗೆ ಸಾಧಿಸುತ್ತಿರುವ ಕೊಡಗಿನ ಪ್ರವಾಸೋದ್ಯಮವನ್ನು ವ್ಯವಸ್ಥಿತ ಹಾಗೂ ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ನೂತನ ವೆಬ್‌ಸೈಟ್ ಅನ್ನು ವಿನ್ಯಾಸಗೊಳಿಸಿದ್ದು, ಭಾಗಮಂಡಲ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
ಈ ಸಂದರ್ಭ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಶಾಸಕರುಗಳಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಸರಕಾರ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಹಾಜರಿದ್ದರು.
ವೆಬ್‌ಸೈಟ್ ವಿಶೇಷತೆಗಳು
ಕೊಡಗು ಪ್ರವಾಸೋದ್ಯಮ ಇತಿಹಾಸದÀಲ್ಲಿ ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್‌ಸೈಟ್ ಇದಾಗಿದೆ.
ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಉತ್ತಮ ಗುಣಮಟ್ಟದ ವಿಶ್ವಾಸಾರ್ಹ ಪ್ರಯಾಣ ಅನುಭವವನ್ನು ಖಚಿತಪಡಿಸಿಕೊಳ್ಳಲು ಪೂರಕವಾಗಿ ಈ ವೆಬ್‌ಸೈಟ್ ಅನ್ನು ವಿನ್ಯಾಸ ಮಾಡಲಾಗಿದೆ.
ನೋಂದಾಯಿತ ಮತ್ತು ಪ್ರಮಾಣೀಕೃತ ಹೋಂಸ್ಟೇ, ರೆಸಾರ್ಟ್, ರೆಸ್ಟೋರೆಂಟ್, ಪ್ರವಾಸಿ ಮಾರ್ಗದರ್ಶಿ, ಟ್ಯಾಕ್ಸಿ ನಿರ್ವಾಹಕರು ಮತ್ತು ಜಿಲ್ಲೆಯ ಅಧಿಕೃತ ಕಾರ್ಯಕ್ರಮಗಳ ವಿವರವನ್ನು exಠಿಟoಡಿeಞoಜಚಿgu.ಛಿom ವೆಬ್‌ಸೈಟ್ ಮೂಲಕ ನೇರವಾಗಿ ನೀಡಬಹುದಾಗಿದೆ.
ಜಿಲ್ಲೆಯ ನೋಂದಾಯಿತ ಆತಿಥ್ಯ ಕೇಂದ್ರಗಳ ಮಾಹಿತಿ ಇದರಲ್ಲಿರಲಿದೆ. ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಪ್ರಮಾಣೀಕರಿಸಿದ ರೆಸ್ಟೋರೆಂಟ್‌ಗಳ ವಿವರ ನೀಡಲಾಗಿದೆ. ಪ್ರವಾಸೋದ್ಯಮ ನೀತಿ ಅಡಿಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಲ್ಪಟ್ಟ ೭೭೮ ಪ್ರವಾಸಿ ತಾಣಗಳಲ್ಲಿ ಕೊಡಗು ಜಿಲ್ಲೆಯಲ್ಲಿ ೨೩ ಪ್ರವಾಸಿ ತಾಣಗಳನ್ನು ವಿಳಾಸ ಹಾಗೂ ಗೂಗಲ್ ಮ್ಯಾಪ್ ಸಹಿತ ನೀಡಲಾಗಿದೆ. ಇದರೊಂದಿಗೆ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ತಾಣಗಳ ಬಗ್ಗೆ ಮಾಹಿತಿಯನ್ನು ನೀಡಿ ಪ್ರವಾಸ ಆಯೋಜಿಸಲು ಅಗತ್ಯವಿರುವ ಎಲ್ಲಾ ವಿವರಗಳನ್ನು ಹೊಂದಿದೆ.
ಪ್ರವಾಸಿ ಮಾರ್ಗದರ್ಶಿಗಳು
ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಪ್ರಚಾರಪಡಿಸುವ ಉದ್ದೇಶದಿಂದ ಜಿಲ್ಲೆಯ ಪ್ರವಾಸಿತಾಣಗಳ ಇತಿಹಾಸ, ಧಾರ್ಮಿಕ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕಲಾವೈವಿಧ್ಯತೆಗಳನ್ನು ಒಳಗೊಂಡ ಸೃಜನಶೀಲತೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರವಾಸಿಗರಿಗೆ ನೀಡಲು ಮಾರ್ಗದರ್ಶಿಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು.
ಜಿಲ್ಲೆಗೆ ಪ್ರವಾಸಿಗರನ್ನು ಸೆಳೆಯಲು ಪ್ರವಾಸಿ ಸಂಪನ್ಮೂಲಗಳ ಬಗ್ಗೆ ಜ್ಞಾನ ಮತ್ತು ಅನುಭವವಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರವಾಸೋದ್ಯಮ ಕೇಂದ್ರ ಕಚೇರಿಯಿಂದ ತರಬೇತಿ ನೀಡಿ ಮಾರ್ಗದರ್ಶಿಗಳನ್ನು ತಯಾರು ಮಾಡಲಾಗುವುದು.
ಸುರಕ್ಷಿತ ಮತ್ತು ವಿಶ್ವಾಸಾರ್ಹ ಸಾರಿಗೆ ಆಯ್ಕೆಗಳನ್ನು ನೀಡುವ ಪ್ರಯಾಣ ಮಾರ್ಗಸೂಚಿಗಳನ್ನು ಪಾಲಿಸುವ ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದಿತ ಟೂರ್ ಮತ್ತು ಟ್ರಾವೆಲ್ ಆಪರೇಟರ್‌ಗಳ ವಿವರವನ್ನು ನೀಡಲಾಗಿದೆ.