ಕುಶಾಲನಗರ, ಫೆ. ೨: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಮಾಡುವ ೨೦೨೪ -೨೫ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ರಾಜ್ಯ ಮಟ್ಟದ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರದ ಕೆ.ಎಸ್. ಮೂರ್ತಿ ಆಯ್ಕೆಯಾಗಿದ್ದಾರೆ. ತಾ. ೫ ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕೆ.ಎಸ್. ಮೂರ್ತಿ ಅವರ ಕ್ರಿಯಾಶೀಲ ಸಾಹಿತ್ಯಪರ ಚಟುವಟಿಕೆಗಳನ್ನು ಮನಗಂಡು ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಸಂಸ್ಥೆಯ ಮೈಸೂರು ವಿಭಾಗೀಯ ಸಂಚಾಲಕಿಯೂ ಆದ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಡಾ. ಕಾವೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.