ಕುಶಾಲನಗರ, ಫೆ. ೨: ಆದಿಚುಂಚನಗಿರಿ ಆಸ್ಪತ್ರೆ ಮತ್ತು ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದ ಸಂಯುಕ್ತ ಆಶ್ರಯದಲ್ಲಿ ತಾ.೪ ರಂದು ಕುಶಾಲನಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಏರ್ಪಡಿಸಲಾಗಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಕೆ. ದಿನೇಶ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕುಶಾಲನಗರದ ಎಪಿಸಿಎಂಎಸ್ ಕಟ್ಟಡ ಸಭಾಂಗಣದಲ್ಲಿ ಅಂದು ಬೆಳಿಗ್ಗೆ ೯ ಗಂಟೆಯಿAದ ಸಂಜೆ ೪ ಗಂಟೆತನಕ ಶಿಬಿರ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಶಿಬಿರದಲ್ಲಿ ಹೃದ್ರೋಗ ತಜ್ಞರು, ನರರೋಗ, ಮೂತ್ರಪಿಂಡ, ಮಧುಮೇಹ, ಕ್ಯಾನ್ಸರ್ ತಪಾಸಣೆ, ಸ್ತಿçÃರೋಗ ತಜ್ಞರು, ದಂತವೈದ್ಯ ತಜ್ಞರು, ಮಕ್ಕಳ ತಜ್ಞರು ಸೇರಿದಂತೆ ನೂರಕ್ಕೂ ಅಧಿಕ ವೈದ್ಯಕೀಯ ತಜ್ಞರುಗಳು ಪಾಲ್ಗೊಳ್ಳಲಿದ್ದಾರೆ.
ಶಿಬಿರದಲ್ಲಿ ಇಸಿಜಿ ಮತ್ತು ರಕ್ತ ಪರೀಕ್ಷೆ ಉಚಿತವಾಗಿ ಮಾಡುವ ಮೂಲಕ ಔಷಧಿಗಳನ್ನು ನೀಡಲಾಗುವುದು ಎಂದು ಹೇಳಿದರು.
ವೈದ್ಯಕೀಯ ತಪಾಸಣೆ ನಡೆಸಿ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಿ ಅಗತ್ಯ ಬಂದಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ ತೆರಳಲು ಗುರುತಿನ ಚೀಟಿ ನೀಡಲಾಗುವುದು ಹಾಗೂ ಆಸ್ಪತ್ರೆ ವಾಹನದಲ್ಲಿಯೇ ಕರೆತಂದು ಹೆಚ್ಚಿನ ಚಿಕಿತ್ಸೆ ನೀಡಿ ಪುನಃ ವಾಪಸ್ ಕಳುಹಿಸಿಕೊಡಲಾಗುವುದು ಎಂದು ದಿನೇಶ್ ಅವರು ಮಾಹಿತಿ ನೀಡಿದರು. ಕುಶಾಲನಗರ ಸುತ್ತಮುತ್ತ ಗಿರಿಜನರ ಹಾಡಿಗಳಿಂದ ಶಿಬಿರಕ್ಕೆ ತೆರಳಲು ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ಶಿಬಿರಕ್ಕೆ ಬೆಳಿಗ್ಗೆ ೯ ಗಂಟೆಗೆ ಶ್ರೀ ಆದಿಚುಂಚನಗಿರಿ ಮಠದ ಶ್ರೀ ಶಂಭುನಾಥ ಸ್ವಾಮೀಜಿಗಳು ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ, ರಾಜ್ಯ ಒಕ್ಕಲಿಗರ ಸಂಘದ ಹರಪಳ್ಳಿ ರವೀಂದ್ರ, ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ ಹಾಗೂ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಕೆ. ದಿನೇಶ್ ಚಾಲನೆ ನೀಡಲಿದ್ದಾರೆ. ಸಾರ್ವಜನಿಕರು ಶಿಬಿರದ ಪ್ರಯೋಜನವನ್ನು ಪಡೆಯುವಂತೆ ಅವರು ಕೋರಿದ್ದಾರೆ.
ಗೋಷ್ಠಿಯಲ್ಲಿ ತಾಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಂ.ಎA. ಪ್ರಕಾಶ್, ನಿರ್ದೇಶಕರಾದ ಮಧುಕುಮಾರ್ ಇದ್ದರು.