ಶನಿವಾರಸಂತೆ, ಫೆ. ೨: ಸಮೀಪದ ಗುಡುಗಳಲೆ ಜಾತ್ರಾ ಮೈದಾನದಲ್ಲಿ ಶ್ರೀ ಜಯದೇವ ಜಾನುವಾರು ಜಾತ್ರಾ ಸಮಿತಿ ವತಿಯಿಂದ ಜಾನುವಾರು ಜಾತ್ರೆ ಪ್ರಯುಕ್ತ ತಾ.೪ ರಂದು ಮಧ್ಯಾಹ್ನ ೩ ಗಂಟೆಗೆ ಹೊನಲು ಬೆಳಕಿನ ಕಬಡ್ಡಿ ಕ್ರೀಡಾಕೂಟವನ್ನು ಕೊಡಗು, ಹಾಸನ, ಮೈಸೂರು ಜಿಲ್ಲೆಯ ಆಟಗಾರರಿಗೆ ಮಾತ್ರ ಸೀಮಿತವಾಗಿ ಹಮ್ಮಿಕೊಳ್ಳಲಾಗಿದೆ.

ಆಸಕ್ತ ಕ್ರೀಡಾ ತಂಡಗಳ ಆಟಗಾರರು ತಾ.೩ ರ ಸಂಜೆ ೭ ಗಂಟೆಯೊಳಗೆ ತಂಡಗಳನ್ನು ನೋಂದಾಯಿಸಿಕೊಳ್ಳಬೇಕು. ಸ್ಪರ್ಧಾಳುಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಮೊದಲ ಬಹುಮಾನ ರೂ. ೪೦,೦೦೦, ದ್ವಿತೀಯ ಬಹುಮಾನ ರೂ. ೩೦,೦೦೦ ಹಾಗೂ ತೃತೀಯ ಬಹುಮಾನ ರೂ. ೨೦,೦೦೦ ಹಾಗೂ ಆಕರ್ಷಕ ಟ್ರೋಫಿಗಳನ್ನು ನೀಡಲಾಗುವುದು ಎಂದು ಜಾತ್ರಾ ಸಮಿತಿ ಅಧ್ಯಕ್ಷ ಅಶೋಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.