ಮಡಿಕೇರಿ, ಫೆ. ೩: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ ಮತ್ತು ಜಿಲ್ಲಾ ಆಯುಷ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮಾಹಿತಿ, ತಪಾಸಣೆ ಮತ್ತು ಕಾನೂನು ಅರಿವು ಕಾರ್ಯಕ್ರಮವು ತಾ.೪ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಪುಂಡಲೀಕ, ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ. ನಿರಂಜನ್, ೧ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾದ ಜಿ.ಪ್ರಶಾಂತಿ, ೩ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ.ಕೆ. ಬಸವರಾಜ್, ಕೌಟುಂಬಿಕ ನ್ಯಾಯಾಲಯ ಪ್ರಧಾನ ನ್ಯಾಯಾಧೀಶರಾದ ಎನ್.ಸುಬ್ರಮಣ್ಯ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಹಿರಿಯ ಸಿವಿಲ್ ನ್ಯಾಯಾ ಧೀಶರು ಮತ್ತು ಸಿಜೆಎಂ ಎನ್.ಬಿ. ಜಯಲಕ್ಷಿö್ಮ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ಸಿ.ಎನ್.ಮುನಿರತ್ನಮ್ಮ, ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ಎನ್.ಎ.ನಾಗೇಶ್, ಸರ್ಕಾರಿ ಅಭಿಯೋಜಕಿ ಕೆ.ಜಿ. ಅಶ್ವಿನಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜ ಜಿ., ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವೈದ್ಯಾಧಿಕಾರಿ ಡಾ.ಅರುಣ್ ಪಿ.ಜಿ., ಜಿಲ್ಲಾ ಸರ್ಕಾರಿ ಆರ್ಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ.ಪಲ್ಲವಿ ನಾಯಕ್, ಇತರರು ಪಾಲ್ಗೊಳ್ಳಲಿದ್ದಾರೆ.