ಮಡಿಕೇರಿ, ಫೆ. ೧೦: ಎಸ್.ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ಸುತ್ತಮುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರÀದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಉಪವಿಭಾಗಾಧಿಕಾರಿ ವಿನಾಯಕ್ ನರ್ವಡೆ ಆದೇಶ ಹೊರಡಿಸಿದ್ದಾರೆ.

ಎಸ್.ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಅಹಿತಕರ ಘಟನೆಯ ವಿಚಾರವಾಗಿ ಸ್ಥಳದಲ್ಲಿ ಪ್ರಸ್ತುತ ಉಂಟಾಗಿರುವ ಬೆಳವಣಿಗೆಗಳ ಸಂಬAಧ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆರಕ್ಷಕ ಅಧೀಕ್ಷಕರ ಕೋರಿಕೆಯನ್ನು ಪರಿಗಣಿಸಿ ಆದೇಶಿಸಲಾಗಿದೆ.

ಕಾನೂನು ಸುವ್ಯವಸ್ಥೆ ಮತ್ತು ಆಂತರಿಕಾ ಭದ್ರತೆ ದೃಷ್ಟಿಯಿಂದ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ೨೦೨೩ರ ಕಲಂ ೧೬೩(೨) ರಡಿ ದತ್ತವಾದ ಅಧಿಕಾರದಂತೆ ನರ್ವಡೆ ವಿನಾಯಕ್ ಕಾರ್ಭಾರಿ ಅವರು ಎಸ್.ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ಸುತ್ತಮುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ತಾ. ೧೧ ರಂದು ಬೆಳಿಗ್ಗೆ ೧೦ ಗಂಟೆಯಿAದ ಮಾರ್ಚ್ ೧೩ ರ ಬೆಳಿಗ್ಗೆ ೧೦ ಗಂಟೆಯವರೆಗೆ ವಿಸ್ತರಿಸಿ ೫ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಪ್ರತಿಭಟನೆ, ಮೆರವಣಿಗೆ, ರ‍್ಯಾಲಿ, ಜಾಥಾ ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ.