ಮಡಿಕೇರಿ, ಫೆ. ೧೦: ಗ್ರಾಮ ಆಡಳಿತಾಧಿಕಾರಿಗಳ ಸಮಸ್ಯೆಗಳ ಪರಿಹಾರ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾ ಘಟಕದಿಂದ ೨ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಿತು.

ಈ ಹಿಂದೆ ಮುಷ್ಕರ ನಡೆಸಿದರೂ ಸರಕಾರ ಸೂಕ್ತ ಕ್ರಮಕೈಗೊಳ್ಳದ ಹಿನ್ನೆಲೆ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾನಿರತರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದರು.

ಈ ಸಂದರ್ಭ ಸಂಘದ ಜಿಲ್ಲಾಧ್ಯಕ್ಷೆ ಅಕ್ಷತಾ ಬಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂತೋಷ ಪಾಟೀಲ್, ಖಜಾಂಚಿ ರವಿಚಂದ್ರ, ಉಪಾಧ್ಯಕ್ಷ ಹರೀಶ್ ಕುಮಾರ್ ತಾಲೂಕು ಅಧ್ಯಕ್ಷರುಗಳಾದ ಸಂದೀಪ್ ಶೆಣೈ, ಕೃಷ್ಣ, ಬಸನಗೌಡ, ಗುರು ದರ್ಶನ್, ಕರಿಬಸವರಾಜ್ ಸೇರಿದಂತೆ ಇನ್ನಿತರರು ಹಾಜರಿದ್ದರು.