ಗೋಣಿಕೊಪ್ಪಲು, ಫೆ. ೧೦: ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೊಡಗು ಜಿಲ್ಲಾ ಜೀವಶಾಸ್ತç ವೇದಿಕೆ ಅಧಿಕೃತವಾಗಿ ಉದ್ಘಾಟನೆಗೊಂಡಿತು. ಕೊಡಗು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಮಂಜುಳ ಕಾರ್ಯಕ್ರಮ ಉದ್ಘಾಟಿಸಿದರು.

ಜೀವಶಾಸ್ತç ವೇದಿಕೆಯು ಮುಂದಿನ ದಿನಗಳಲ್ಲಿ ಅನೇಕ ರೀತಿಯ ತರಬೇತಿ ಕಾರ್ಯಾಗಾರ ಗಳನ್ನು ಹಮ್ಮಿಕೊಳ್ಳುವ ಮೂಲಕ ಶೈಕ್ಷಣಿಕವಾಗಿ ಜಿಲ್ಲೆಯ ಫಲಿತಾಂಶ ದಲ್ಲಿ ಪ್ರಗತಿ ಸಾಧಿಸಬೇಕೆಂದು ಅವರು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಜ್ಯೋತಿ ಅಧ್ಯಕ್ಷತೆಯಲ್ಲಿ ಕಾರ್ಯಾಗಾರ ನಡೆಯಿತು. ಇತ್ತೀಚೆಗೆ ನಿವೃತ್ತಿಗೊಂಡ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿಯವರಾದ ಮಮತರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಮದ್ದೂರು ಸರ್ಕಾರಿ ಮಹಿಳಾ ಪ.ಪೂ.ಕಾಲೇಜಿನ ಉಪನ್ಯಾಸಕರಾದ ರವಿಕುಮಾರ್ ಅವರು ಆಗಮಿಸಿ ತರಬೇತಿ ನಡೆಸಿದರು.

ಈ ವೇಳೆ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ಗೋಣಿಕೊಪ್ಪಲು ವಿನ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ರಘುನಾಥ್ ಸ್ವಾಗತಿಸಿ, ಸರ್ಕಾರಿ ಪ.ಪೂ. ಕಾಲೇಜಿನ ದಮಯಂತಿ ಕಾರ್ಯಕ್ರಮ ನಿರೂಪಿಸಿ, ಸಂತ ಅನ್ನಮ್ಮ ಕಾಲೇಜಿನ ರಶ್ಮಿ ವಂದಿಸಿದರು. ಜಿಲ್ಲೆಯ ವಿವಿಧ ಕಾಲೇಜುಗಳ ಜೀವಶಾಸ್ತç ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸರ್ಕಾರಿ ಪ.ಪೂ. ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಿಲ್ಲವಂಡ ಕಾವೇರಪ್ಪ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.