ಮಡಿಕೇರಿ, ಫೆ. ೧೦ : ಸಂಪಾಜೆ ಪಯಸ್ವಿನಿ ಪಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿಯ ಎಲ್ಲಾ ೧೩ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಮತದಾರರಿಗೆ ಅಭಿನಂದನಾ ಸಮರ್ಪಣೆ ಮತ್ತು ಚೆಂಬು, ಸಂಪಾಜೆ ಶಕ್ತಿಕೇಂದ್ರ ವ್ಯಾಪ್ತಿಯ ಬೃಹತ್ ಬಿಜೆಪಿ ಸಮಾವೇಶವನ್ನು ಬಾಲಂಬಿ ಸೊಸೈಟಿಯ ಆವರಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಚೆಂಬು, ಸಂಪಾಜೆ ಮತ್ತು ಪೆರಾಜೆ ಗ್ರಾಮಗಳಲ್ಲಿ ಬಿಜೆಪಿಯ ಸಂಘಟನಾ ಶಕ್ತಿ ಇಡೀ ಕೊಡಗು ಜಿಲ್ಲೆಗೆ ಮಾದರಿ ಎಂದು ಪ್ರಶಂಸಿಸಿದರು.
ಸAಘದ ಅಧ್ಯಕ್ಷ ಅನಂತ್ ಊರುಬೈಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ಮಾಜಿ ಅಧ್ಯಕ್ಷÀ್ಷ ಮನು ಮುತ್ತಪ್ಪ, ಉಪಾಧ್ಯಕ್ಷ ಕಾಂಗೀರ ಅಶ್ವಿನ್, ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ. ನಾಗೇಶ್ ಕುಂದಲ್ಪಾಡಿ ಮಾತನಾಡಿದರು.
ಚೆಂಬು ಶಕ್ತಿ ಕೇಂದ್ರ ಅಧ್ಯಕ್ಷ ಸುಬ್ರಮಣ್ಯ ಉಪಧ್ಯಾಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಉದಯ ಹನಿಯಡ್ಕ, ತೀರ್ಥರಾಮ ಪೂಜಾರಿಗದ್ದೆ, ರಮಾದೇವಿ ಕಳಗಿ, ಯಶವಂತ ದೇವರಗುಂಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.