ಬಾಗಪ್ಪ ಹರಿಜನ್ ಹತ್ಯೆ

ವಿಜಯಪುರ, ಫೆ. ೧೨: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬAಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ ೮.೫೦ ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತçಗಳಿಂದ ಮುಖ, ತಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಬಾರಿ ಹಂತಕರು ಯೋಜಿತ ರೀತಿಯಲ್ಲಿ ದಾಳಿ ನಡೆಸಿ ಬಾಗಪ್ಪನನ್ನು ಕೊಂದು ಹಾಕಿದ್ದಾರೆ. ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಬಾಗಪ್ಪ ರಾತ್ರಿ ೮.೫೦ ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್.ಪಿ. ಲಕ್ಷö್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಪತ್ತೆಗಾಗಿ ರಾಮನಗೌಡ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ.ಈ ಹಿಂದೆ ೨೦೨೩ ರಲ್ಲಿ ಕೋರ್ಟ್ ಆವರಣದಲ್ಲಿ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಸುಮಾರು ೨೦ ಜನರಿಂದ ತಂಡ ಯೋಜಿತ ರೀತಿಯಲ್ಲಿ ದಾಳಿ ನಡೆಸಿದ್ದು, ಬಾಗಪ್ಪ ಹರಿಜನ್ ಹತ್ಯೆ ಮಾಡಿದೆ.

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆAಗಳೂರು, ಫೆ. ೧೨: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಹಲವು ಸಲಹೆಗಳನ್ನು ನೀಡಲಾಗಿದ್ದು ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಈ ಹಿಂದೆಯೂ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಸುಗ್ರೀವಾಜ್ಞೆಯನ್ನು ಕಳುಹಿಸಿತ್ತು. ಆದರೆ ರಾಜಭವನ ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿತ್ತು. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹಲವಾರು ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಡಿವಾಣ ಹಾಕಲು ಮುಂದಾಗಿದೆ. ಮುಂದಿನ ಅಧಿವೇಶನದಲ್ಲಿ ಅದರ ಸಾಧಕ ಮತ್ತು ಬಾಧಕಗಳ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡುವ ನಿರ್ಧಾರ ಮಾಡಬೇಕಿದೆ.

ಕಲ್ಲು ತೂರಾಟ ಪ್ರಕರಣ - ೮ ಮಂದಿ ಬಂಧನ

ಮೈಸೂರು, ಫೆ. ೧೨: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬAಧಿಸಿದAತೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಶಾಂತಿನಗರದ ನಿವಾಸಿಗಳಾದ ಸುಹೇಲ್ ರಹಿಲ್ ಪಾಶಾ, ಅಯಾನ್ ಬಿನ್ ಜಬೀವುಲ್ಲಾ, ಗೌಸಿಯಾ ನಗರದ ಸೈಯದ್ ಸಾದಿಕ್ ಬಿನ್ ನವೀದ್, ಸತ್ಯನಗರದ ಇಜಾಜ್ ಬಿನ್ ಅಬ್ದುಲ್ ವಾಜೀದ್, ರಾಜೀವ್ ನಗರದ ಸಾದಿಕ್ ಪಾಶಾ ಸೇರಿದಂತೆ ೮ ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತಷ್ಟು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಮೌಲ್ವಿಯೊಬ್ಬರ ಪ್ರಚೋದನಕಾರಿ ಭಾಷಣ ಮಾಡಿರುವ ವೀಡಿಯೋ ವೈರಲ್ ಆದ ಬಳಿಕ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಹಿನ್ನೆಲೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮುಫ್ತಿ ಮುಷ್ತಾಕ್ ಮಕ್ಬೋಲಿ ಎಂಬ ಮೌಲ್ವಿಯ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕೋವಿಡ್ ಹಗರಣ-ನ್ಯಾಯಾಲಯಕ್ಕೆ ವರದಿ ಸಲ್ಲಿಕೆ

ಬೆಂಗಳೂರು, ಫೆ. ೧೨: ಕೋವಿಡ್-೧೯ರ ಎರಡನೇ ಅಲೆಯ ಸಂದರ್ಭದಲ್ಲಿ, ಪ್ರುಡೆಂಟ್ ಮ್ಯಾನೇಜ್‌ಮೆಂಟ್ ಸಲ್ಯೂಷನ್ಸ್' ಮತ್ತು ಎಲ್‌ಎಜೆ ಎಕ್ಸ್ಪೋರ್ಟ್ಸ್ ಲಿಮಿಟೆಡ್ ಕಂಪೆನಿಗಳು ಪಿಪಿಇ ಕಿಟ್‌ಗಳನ್ನು ದುಬಾರಿ ಬೆಲೆಗೆ ಪೂರೈಕೆ ಮಾಡಿವೆ ಎಂಬ ಆರೋಪಕ್ಕೆ ಸಂಬAಧಿಸಿದAತೆ ನ್ಯಾಯಮೂರ್ತಿ ಜಾನ್ ಮೈಕಲ್ ಕುನಾ ಅವರ ಏಕಸದಸ್ಯ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಸಲ್ಲಿಸಿದೆ. ಪಿಪಿಇ ಕಿಟ್ ಪೂರೈಸಿರುವ ಈ ಎರಡೂ ಖಾಸಗಿ ಕಂಪೆನಿಗಳ ಪರ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವಕೇಟ್ ಜನರಲ್ ರೂಬೆನ್ ಜಾಕೊಬ್, ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿ ಪಿಪಿಇ ಕಿಟ್‌ಗಳನ್ನು ಪೂರೈಸಲು ಕಂಪೆನಿಗಳು ಟೆಂಡರ್ ಪಡೆದುಕೊಂಡಿದ್ದವು. ಆದರೆ, ಎರಡನೇ ಅಲೆ ಸಂದರ್ಭದಲ್ಲಿ ಹೊಸದಾಗಿ ಟೆಂಡರ್‌ನಲ್ಲಿ ಪಾಲ್ಗೊಳ್ಳದೇ ಅಧಿಕಾರಿಗಳ ಜೊತೆ ಶಾಮೀಲಾಗಿ ಆರೋಗ್ಯ ಇಲಾಖೆಗೆ ಪಿಪಿಇ ಕಿಟ್‌ಗಳನ್ನು ಪೂರೈಸಿವೆ ಎಂದು ದೂರಿದರು.

ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸಾವು

ಬೆಂಗಳೂರು, ಫೆ. ೧೨: ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್ಮೆಂಟ್‌ನ ೨೦ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು, ೧೫ ವರ್ಷದ ಅವಂತಿಕಾ ಚೌರಾಸಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್ಮೆಂಟ್‌ನಲ್ಲಿ ವಾಸವಿದ್ದ ಅವಂತಿಕಾ ಚೌರಾಸಿಯಾಗೆ ತಾಯಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹತ್ತಿರ ಬರುತ್ತಾ ಇದೆ. ಹೀಗಾಗಿ ಮೊಬೈಲ್ ಬಿಟ್ಟು ಪರೀಕ್ಷೆಗೆ ಓದು ಎಂದು ಬೈದಿದ್ದಾರೆ. ಇದರಿಂದ ದುಡುಕಿದ ಅವಂತಿಕಾ ಅಪಾರ್ಟ್ಮೆಂಟ್‌ನಿAದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಧಾನಸೌಧದ ಮುಂದೆ ಬಿಜೆಪಿ ನಾಯಕರ ಪ್ರತಿಭಟನೆ

ಬೆಂಗಳೂರು, ಫೆ. ೧೨: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಿಗಳಿಗೆ ‘ಆತ್ಮಹತ್ಯೆ ಭಾಗ್ಯ' ಕರುಣಿಸಿದೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಅಶೋಕ್ ಅವರು, ‘ಸಿದ್ದು ಸರ್ಕಾರದಲ್ಲಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ' ಎಂಬ ಘೋಷಣೆಯುಳ್ಳ ಭಿತ್ತಿಪತ್ರ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರು ‘ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ಕೊಡಿ' ಎಂಬ ಭಿತ್ತಿಪತ್ರಗಳನ್ನು ಹಿಡಿದು ಕೊಂಡಿದ್ದರು. ರಾಜ್ಯದಲ್ಲಿ ನಿಷ್ಠಾವಂತ ಅಧಿಕಾರಿಗಳು ಕೆಲಸ ಮಾಡಲು ಆಗದ ಪರಿಸ್ಥಿತಿ ಇದೆ. ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಸಬ್ ಇನ್ಸ್ಪೆಕ್ಟರ್ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ನಿರಂತರವಾಗಿ ಸರಣಿಯಲ್ಲಿ ಆತ್ಮಹತ್ಯೆ ನಡೆಯುತ್ತಿದೆ. ಅಧಿಕಾರಿಗಳನ್ನು ಬೆದರಿಸುವ ಕೆಲಸ ಮುಂದುವರೆದಿದೆ. ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ಇದರ ಕುರಿತು ಚಕಾರ ಎತ್ತಿಲ್ಲ ಎಂದು ದೂರಿದರು.

ಮೂವರು ಉಗ್ರರ ಬಂಧನ

ಇAಫಾಲ, ಫೆ. ೧೨: ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ನಿಷೇಧಿತ ಪ್ರಿಪಾಕ್ ಪ್ರೊ ಸಂಘಟನೆಯ ಸದಸ್ಯರು. ಇವರನ್ನು ನಾಮ್‌ದುಲೊಂಗ್ ಖುಮಾನ್ ಲಂಪಕ್ ಕ್ರೀಡಾಂಗಣದ ರಸ್ತೆಯಲ್ಲಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ನಿಷೇಧಿತ ಪ್ರಿಪಾಕ್ ಪ್ರೊ ಸಂಘಟನೆಯ ಕರಪತ್ರ ಮತ್ತು ಇತರ ಪರಿಕರಗಳನ್ನು ಬಂಧಿತರಿAದ ವಶಕ್ಕೆ ಪಡೆಯಲಾಗಿದೆ. ಇನ್ನೊಂದು ಪ್ರಕರಣದಲ್ಲಿ ನಿಷೇಧಿತ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಾರ್ಟಿ ಸದಸ್ಯನೊಬ್ಬನನ್ನು ಲಾಂಗೋಲ್ ಗೇಮ್ ಗ್ರಾಮದಲ್ಲಿ ಬಂಧಿಸಲಾಗಿದೆ. ಬಂಧಿತನಿAದ ಎರಡು ರೇಡಿಯೋ ಸೆಟ್, ನಾಲ್ಕು ಚಾರ್ಜರ್‌ಗಳು, ಬ್ಯಾಗ್, ೫೮ ಖಾಲಿ ಶೆಲ್‌ಗಳಿದ್ದ ಎರಡು ಅಶ್ರುವಾಯು ಶೆಲ್‌ಗಳ ಬಾಕ್ಸ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.