ಸೋಮವಾರಪೇಟೆ, ಫೆ. ೧೧: ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಯಾಗಿದೆ. ಕ್ರೀಡೆಯಿಂದಲೂ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯವಿದೆ ಎಂದು ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಿಸಿದರು.

ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಆವರಣದಲ್ಲಿ, ವಿದ್ಯಾರ್ಥಿಗಳು ಮತ್ತು ಪೋಷಕರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಉತ್ತಮ ಆರೋಗ್ಯವಿದ್ದರೆ ಕಲಿಕೆಗೆ ಉಪಯೋಗವಾಗುತ್ತದೆ. ಪೋಷಕರು ಕೂಡ ಮಕ್ಕಳ ಕ್ರೀಡಾಸಕ್ತಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ಕ್ರೀಡೆ ಎಂಬುದು ಕೊಡಗಿನ ಜನರ ರಕ್ತದಲ್ಲೇ ಬಂದಿದೆ. ಕ್ರೀಡಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿರುವ ಅನೇಕರು ಉತ್ತಮ ಹುದ್ದೆಯನ್ನು ಪಡೆದಿದ್ದಾರೆ. ಸೋಮವಾರಪೇಟೆ ತಾಲೂಕಿನ ಅನೇಕ ಪ್ರತಿಭೆಗಳು ಹಾಕಿ ಕ್ರೀಡೆಯಲ್ಲಿ ಸಾಧನೆ ಮಾಡಿದ್ದಾರೆ. ರಾಷ್ಟಿçÃಯ ಹಾಗೂ ಅಂರ‍್ರಾಷ್ಟಿçÃಯ ಮಟ್ಟದಲ್ಲಿ ಆಟವಾಡಿದ್ದಾರೆ. ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ ಎಂದು ಶಾಸಕರು ಅಭಿಪ್ರಾಯಿಸಿದರು.

ಜನಪ್ರತಿನಿಧಿಗಳು ಕೂಡ ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ನಿರಂತರ ಸಹಕಾರ ನೀಡಬೇಕು ಎಂದ ಅವರು, ಗ್ರಾಮೀಣ ಪ್ರದೇಶದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಲು ಪಣತೊಟ್ಟಿರುವ ಒಕ್ಕಲಿಗರ ಸಂಘದ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಅತಿಥಿಯಾಗಿದ್ದ ಮೈಸೂರು ನೇಗಿಲಯೋಗಿ ಟ್ರಸ್ಟ್ನ ಅಧ್ಯಕ್ಷ ಡಾ. ಡಿ. ರವಿಕುಮಾರ್ ಮಾತನಾಡಿ, ಎಸ್‌ಎಸ್‌ಎಲ್‌ಸಿ, ಪಿಯುಸಿ ನಂತರ ಮಕ್ಕಳಿಗೆ ಬೇಡಿಕೆ ಯಿರುವ ಕೋರ್ಸ್ಗಳನ್ನು ಕೊಡಿಸಬೇಕು. ಮಕ್ಕಳು ಮೊಬೈಲ್, ಟಿ.ವಿ.ಯಿಂದ ದೂರವಿರಬೇಕು. ಪೋಷಕರು ಮಕ್ಕಳು ಓದುವಾಗ ಟಿ.ವಿ.ಯಲ್ಲಿ ಸಿರಿಯಲ್ ನೋಡುತ್ತಾ, ಮೊಬೈಲ್‌ನಲ್ಲಿ ಚಾಟಿಂಗ್ ಮಾಡುತ್ತ ಕುಳಿತರೆ, ಅದನ್ನೇ ಮಕ್ಕಳು ಕಲಿಯುತ್ತಾರೆ. ಪೋಷಕರು ಬದಲಾದರೆ ಮಕ್ಕಳನ್ನು ಬದಲಾಯಿಸಬಹುದು ಎಂದು ಹೇಳಿದರು. ವಿದ್ಯಾರ್ಥಿಗಳು ಕನ್ನಡ, ಇಂಗ್ಲೀಷ್, ಹಿಂದಿ ಭಾಷೆಯನ್ನು ಕಲಿಯಲೇಬೇಕು. ತಾವು ತೆಗೆದುಕೊಂಡ ವಿಷಯದಲ್ಲಿ ಉನ್ನತ ಶಿಕ್ಷಣ ಪೂರೈಸಿದರೆ ಪ್ರತಿಯೊಬ್ಬರಿಗೂ ನೌಕರಿ ಸಿಗುತ್ತದೆ ಎಂದು ಹೇಳಿದರು. ವೇದಿಕೆಯಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಉಪಾಧ್ಯಕ್ಷ ಎಸ್.ಬಿ. ಭರತ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಪ್ರಗತಿಪರ ಮಹಿಳಾ ವೇದಿಕೆ ಅಧ್ಯಕ್ಷೆ ಪೂರ್ಣಿಮಾ ಗೋಪಾಲ್, ವಿದ್ಯಾಸಂಸ್ಥೆಯ ಭಾತ್ಮೀದಾರ ಕೆ.ಎಂ. ಜಗದೀಶ್, ಸಂಘದ ಪದಾಧಿಕಾರಿಗಳಾದ ಎನ್.ಬಿ. ಗಣಪತಿ, ನಂದಕುಮಾರ್, ಲಿಂಗರಾಜು, ನೇಗಿಲಯೋಗಿ ಟ್ರಸ್ಟ್ನ ಶೋಭ ರಮೇಶ್, ಪ್ರಾಂಶುಪಾಲರಾದ ಮಿಲ್‌ಡ್ರೆಡ್ ಗೋನ್ಸಾಲ್ವೆಸ್ ಇದ್ದರು. ಪೋಷಕರು ಮತ್ತು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.