ಪೊನ್ನಂಪೇಟೆ, ಫೆ. ೧೨: ಇತ್ತೀಚೆಗೆ ಹಳ್ಳಿಗಟ್ಟು ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ರಾಜ್ಯದ ಇಂಜಿನಿಯರಿAಗ್ ಕಾಲೇಜಿನ ಪ್ರಾಧ್ಯಾಪಕರಿಗೆ ಕೌಶಲ್ಯಾಭಿವೃದ್ಧಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಕಳದ ನಿಟ್ಟೆ ತಾಂತ್ರಿಕ ವಿದ್ಯಾಲಯದ ಪ್ರಾಧ್ಯಾಪಕ ರೋಷನ್ ಫರ್ನಾಂಡಿಸ್ ಮತ್ತು ಶಿವಮೊಗ್ಗದ ಜವಾಹರಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಇಂಜಿನಿಯರಿAಗ್ ಕಾಲೇಜಿನ ಪ್ರಾಧ್ಯಾಪಕ ಪ್ರಶಾಂತ್, ಪೊನ್ನಂಪೇಟೆ ಸಿ.ಐ.ಟಿ. ಕಾಲೇಜಿನ ಪ್ರಾಧ್ಯಾಪಕರಾದ ಮುರುಳಿ ಮತ್ತು ವಿಘ್ನೇಶ್ ಪಾಲ್ಗೊಂಡಿದ್ದರು.

ತಂತ್ರಜ್ಞಾನ ಕ್ಷೇತ್ರದಲ್ಲಿನ ಪ್ರಗತಿಯು ದೇಶದ ಅಭಿವೃದ್ಧಿಗೆ ಅಭೂತಪೂರ್ವ ಕೊಡುಗೆಯನ್ನು ನೀಡುತ್ತಿದೆ. ಆದ್ದರಿಂದ ತಾಂತ್ರಿಕ ಜ್ಞಾನದ ಅರಿವನ್ನು ಗಳಿಸುವುದು ಅತ್ಯವಶ್ಯಕವಾಗಿದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಸಂಶೋಧನಾ ಮನೋಭಾವವನ್ನು ಮೂಡಿಸುವ ಮೂಲಕ ವಿನೂತನ ಆವಿಷ್ಕಾರಕ್ಕೆ ಉತ್ತೇಜನ ನೀಡಬೇಕೆಂದು ಸಂಪನ್ಮೂಲ ವ್ಯಕ್ತಿಗಳು ಕಾರ್ಯಾಗಾರದಲ್ಲಿ ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಕೊಡವ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷ ಕೆ.ಎ. ಚಿಣ್ಣಪ್ಪ, ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥ ಹಾಗೂ ಪ್ರಭಾರ ಪ್ರಾಂಶುಪಾಲ ಪ್ರೊ. ಎ.ಜಿ. ತಿಮ್ಮಯ್ಯ, ಬೆಂಗಳೂರು ಸಹ್ಯಾದ್ರಿ ಇಂಜಿನಿಯರಿAಗ್ ಕಾಲೇಜಿನ ಪ್ರಾಧ್ಯಾಪಕರು, ಶ್ರೀನಿವಾಸ ಇಂಜಿನಿಯರಿAಗ್ ಕಾಲೇಜಿನ ಪ್ರಾಧ್ಯಾಪಕ ವೃಂದ, ಸಿ.ಐ.ಟಿ. ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು.

ಪೊನ್ನಮ್ಮ ಎಂ.ಯು. ಸ್ವಾಗತಿಸಿ, ಡಾ. ರಾಮಕೃಷ್ಣ ಬಿ.ಬಿ. ವಂದಿಸಿದರು.