ವೀರಾಜಪೇಟೆ, ಫೆ. ೧೨ : ರೂ. ೨೩ ಲಕ್ಷ ವೆಚ್ಚದಲ್ಲಿ ಬಾಳುಗೋಡು ಕೊಡವ ಸಮಾಜದ ಮೈದಾನ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು, ಜನಾಂಗದಲ್ಲಿ ಅನೇಕ ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದು, ಅಂತವರಿಗೆ ಸೂಕ್ತ ಅವಕಾಶಗಳು ಬೇಕಿವೆ. ಅದಕ್ಕೆ ಮೈದಾನಗಳ ಅತ್ಯಗತ್ಯ. ಈ ನಿಟ್ಟಿನಲ್ಲಿ ಮೈದಾನ ಅಭಿವೃದ್ಧಿ ಕಾರ್ಯ ಕೈಗೊಂಡಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಬಾಳುಗೋಡು ಕೊಡವ ಸಮಾಜ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ ಹಾಗೂ ಕೊಡವ ಸಮಾಜದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.