ಮಡಿಕೇರಿ, ಫೆ. ೧೨: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರು ತಾ. ೧೪ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಧ್ಯಕ್ಷರು ತಾ. ೧೪ ರಂದು ಬೆಳಿಗ್ಗೆ ೧೦ ಗಂಟೆಯಿAದ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸಂಘ-ಸAಸ್ಥೆಗಳು ಮತ್ತು ಸಾಮಾನ್ಯ ಅಲೆಮಾರಿ ಸಮುದಾಯದ ಜನರಿಂದ ಕುಂದು ಕೊರತೆಗಳ ಅಹವಾಲು ಸ್ವೀಕರಿಸಲಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಮುಖಂಡರು ಮತ್ತು ಸಮುದಾಯದ ಜನರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ನಂತರ ಬೆಳಿಗ್ಗೆ ೧೧.೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.