ವೀರಾಜಪೇಟೆ, ಫೆ. ೧೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವೀರಾಜ ಪೇಟೆ ವತಿಯಿಂದ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮ ಹಾಗೂ ಬೆಂಚ್ ಡೆಸ್ಕ್ ವಿತರಣೆ ಕಾರ್ಯಕ್ರಮ ಬಿರುನಾಣಿ ಮರೆನಾಡು ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಶೀಕ್ ಕಾವೇರಪ್ಪ ವಹಿಸಿದ್ದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಪ್ತ ಸಮಾಲೋಚಕಿ ರಮ್ಯಾ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಸ್ವಾಸ್ಥ÷್ಯ ಸಂಕಲ್ಪ ಕಾರ್ಯಕ್ರಮದ ಉದ್ದೇಶ, ಪ್ರೌಢಾವಸ್ಥೆಯ ಮಕ್ಕಳು ಸಾಮಾಜಿಕವಾಗಿ, ಮಾನಸಿಕವಾಗಿ ಹೇಗೆ ಬಲಿಷ್ಟರಾಗಿರಬೇಕು, ದುಶ್ಚಟಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಮಾಹಿತಿ ನೀಡಿ, ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ೧೦ ಜೊತೆ ಬೆಂಚ್ - ಡೆಸ್ಕ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮರೆನಾಡು ಪ್ರಾಢ ಶಾಲೆಯ ಗೌರವ ಕಾರ್ಯದರ್ಶಿ ಬೇಬಿ ನಂಜಮ್ಮ, ಶಾಲಾ ಆಡಳಿತ ಮಂಡಳಿ ನಿರ್ದೇಶಕರುಗಳಾದ ಸುನಂದ, ಬೋಪಣ್ಣ, ಕೊಡಗು ಜಿಲ್ಲಾ ಜನ ಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಬಾನಂಗಡ ಅರುಣ್, ಗ್ರಾಮ ಪಂಚಾಯಿತಿ ಸದಸ್ಯೆ ಸರಸ್ವತಿ, ಮುಖ್ಯ ಶಿಕ್ಷಕ ಕಿಶೋರ್, ಮೇಲ್ವಿಚಾರಕ ನಾಗರಾಜ್, ಕೃಷಿ ಮೇಲ್ವಿಚಾರಕ ವಸಂತ್, ದೇಚಮ್ಮ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.