ಮಡಿಕೇರಿ, ಫೆ. ೧೨: ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ತಾ.೧೪ ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ ೧೦.೩೦ ಗಂಟೆಯಿAದ ೧೧.೩೦ರ ವರೆಗೆ ಸತ್ಯಾಗ್ರಹ ನಡೆಸಿ ಕೊಡವರ ಹಕ್ಕೊತ್ತಾಯಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.