ಕುಶಾಲನಗರ, ಫೆ. ೧೧: ಜಿಲ್ಲೆಯಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಅತ್ಯಾಧುನಿಕ ತಂತ್ರಜ್ಞಾನದೊAದಿಗೆ ಸಮರ್ಪಕಗೊಳಿಸುವ ಸಂಬAಧ ರಾಜ್ಯ ಸರ್ಕಾರ ೨೨೦ ಕೋಟಿ ರೂಗಳ ಅನುದಾನ ಕಲ್ಪಿಸಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ತಿಳಿಸಿದ್ದಾರೆ.

ಕುಶಾಲನಗರ ತಾಲೂಕು ತ್ರೆöÊಮಾಸಿಕ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮತ್ತು ಗ್ರಾಮ ಪಂಚಾಯಿತಿಗಳ ಪ್ರಗತಿ ಹಾಗೂ ವಿವಿಧ ಇಲಾಖೆಗಳ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಐದು ಉಪ ವಿಭಾಗಗಳಿಗೆ ತಲಾ ೪೦ ಕೋಟಿಯಿಂದ ೫೦ ಕೋಟಿ ರೂ. ಗಳ ಅನುದಾನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ ಬಿಡುಗಡೆಯಾಗಿದ್ದು, ಈ ಮೂಲಕ ಅಗತ್ಯವಿರುವ ತಂತ್ರಜ್ಞಾನಗಳೊAದಿಗೆ ಸಮರ್ಪಕ ವಿದ್ಯುತ್ ಪೂರೈಕೆ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಕಂಬಗಳ ಮತ್ತು ಟ್ರಾನ್ಸ್ಫಾರ್ಮರ್‌ಗಳ ಬದಲಾವಣೆ ಸ್ಥಳಾಂತರ ಆಧುನಿಕ ತಂತಿಗಳ ಜೋಡಣೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ಕುಶಾಲನಗರ ಐತಿಹಾಸಿಕ ಕೆರೆ ತಾವರೆಕೆರೆಯ ಅಭಿವೃದ್ಧಿಗಾಗಿ ಈಗಾಗಲೇ ಎರಡು ಕೋಟಿ ರೂಗಳನ್ನು ಮೀಸಲಿರಿಸಲಾಗಿದ್ದು ಕೆರೆಯ ಒತ್ತುವರಿ ತೆರವುಗೊಳಿಸಿ ಸಂರಕ್ಷಣೆ ಮಾಡುವ ಮೂಲಕ ಅಭಿವೃದ್ಧಿ ಕಾಮಗಾರಿಗೆ ಈ ತಿಂಗಳ ಅಂತ್ಯದೊಳಗಾಗಿ ಟೆಂಡರ್ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು. ತಕ್ಷಣವೇ ಗುಂಡೂರಾವ್ ೩ಆರನೇ ಪುಟಕ್ಕೆ

(ಮೊದಲ ಪುಟದಿಂದ) ಬಡಾವಣೆಯ ಬಗ್ಗೆ ಚರ್ಚಿಸಲು ಐಡಿಎಸ್‌ಎಂಟಿ ಸಭೆ ಕರೆಯುವ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಶಾಸಕರು ಹೇಳಿದರು.

ಕುಶಾಲನಗರ ಪಟ್ಟಣದಲ್ಲಿ ರಥ ಬೀದಿ ಸೇರಿದಂತೆ ಕೆಲವು ರಸ್ತೆಗಳನ್ನು ನೂತನವಾಗಿ ಅಭಿವೃದ್ಧಿ ಗೊಳಿಸುವ ಯೋಜನೆ ಬಗ್ಗೆ ಮಾತನಾಡಿದ ಶಾಸಕರು ಸದ್ಯದಲ್ಲೇ ರಥ ಬೀದಿ ವ್ಯಾಪ್ತಿಯ ನಿವಾಸಿಗಳು ಹಾಗೂ ವ್ಯಾಪಾರಿಗಳ ಸಭೆ ಕರೆದು ಈ ಬಗ್ಗೆ ಚರ್ಚಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ರಥ ಬೀದಿ ಹಾಗೂ ಐಬಿ ಸಮೀಪದ ಬೈಪಾಸ್ ರಸ್ತೆಯನ್ನು ಸೌಂದರ್ಯಗೊಳಿಸುವ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಿಸಲು ಚಿಂತಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರದ ಅಗತ್ಯತೆ ಇದೆ ಎಂದರು. ಕುಶಾಲನಗರದಲ್ಲಿ ಇಂದಿರಾ ಕ್ಯಾಂಟೀನ್ ಸದ್ಯದಲ್ಲೇ ಆರಂಭವಾಗಲಿದೆ, ಸರಕಾರಿ ಬಸ್ ನಿಲ್ದಾಣದ ಆವರಣದಲ್ಲಿ ಸ್ವಚ್ಛತೆ ಕಾಪಾಡುವ ಜೊತೆಗೆ ಮರ ಗಿಡಗಳಿಗೆ ಹಾನಿಯಾಗದಂತೆ ಪರಿಸರವನ್ನು ಸಂರಕ್ಷಣೆ ಮಾಡುವುದಾಗಿ ಅವರು ತಿಳಿಸಿದರು.

ಕುಶಾಲನಗರ ಪಟ್ಟಣದ ಅಭಿವೃದ್ಧಿಗೆ ಸರಕಾರ ಎರಡು ಕೋಟಿ ರೂ ಅನುದಾನ ನೀಡಿದ್ದು ಸದ್ಯದಲ್ಲೇ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮ ನೆರವೇರಿಸುವುದಾಗಿ ಅಧಿಕಾರಿಗಳಿಗೆ ಮಾಹಿತಿ ಒದಗಿಸಿದರು. ಪೊಲೀಸ್ ಇಲಾಖೆ ಮೂಲಕ ಕಟ್ಟುನಿಟ್ಟಿನ ಕಾನೂನು ಪಾಲನೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸಮರ್ಪಕ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.

ದುಬಾರೆ ಪ್ರವಾಸಿ ಕೇಂದ್ರದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಂದಾಜು ರೂ.೭.೩ ಕೋಟಿ ವೆಚ್ಚದಲ್ಲಿ ತೂಗುಸೇತುವೆ ನಿರ್ಮಾಣ ಕಾಮಗಾರಿ ಮಾರ್ಚ್ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು. ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗುವಂತೆ ಸೂಚಿಸಿದರು. ಬೇಸಿಗೆ ಅವಧಿಯಲ್ಲಿ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಅಗತ್ಯವಿರುವ ಕುಡಿಯುವ ನೀರಿನ ಸರಬರಾಜು ಬಗ್ಗೆ ಕ್ರಿಯಾಯೋಜನೆ ರೂಪಿಸುವುದು ಯಾವುದೇ ರೀತಿಯಲ್ಲಿ ದುರುಪಯೋಗ ಆಗದಂತೆ ಎಚ್ಚರವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಶಾಸಕರು ಕಿವಿಮಾತು ಹೇಳಿದರು.

ಅರಣ್ಯದಲ್ಲಿ ಕಾಡಾನೆಗಳು ಸೇರಿದಂತೆ ವನ್ಯಜೀವಿಗಳಿಗೆ ಅಗತ್ಯ ಉಳ್ಳ ಕೆರೆಗಳ ಅಭಿವೃದ್ಧಿ ಹಾಗೂ ಅರಣ್ಯದಲ್ಲಿ ಆಹಾರ ದೊರಕುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರು ನಿರ್ದೇಶನ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಬಹುತೇಕ ವೈಫಲ್ಯ ಕಂಡಿದ್ದು ತಕ್ಷಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಲಾಯಿತು. ೪೭ ಗ್ರಾಮಗಳಲ್ಲಿ ಈ ಯೋಜನೆ ಇನ್ನೂ ಪೂರ್ಣಗೊಳ್ಳದಿರುವ ಬಗ್ಗೆ ಅಧಿಕಾರಿಗಳಿಂದ ಸಮಜಾಯಿಸಿಕೆ ಕೇಳಲಾಯಿತು.

ಕಂದಾಯ ಇಲಾಖೆ ಆಹಾರ ಇಲಾಖೆ ಕಾರ್ಮಿಕ ಇಲಾಖೆ ಕುಶಾಲನಗರ ಯೋಜನಾ ಅಭಿವೃದ್ಧಿ ಪ್ರಾಧಿಕಾರ ಪುರಸಭೆ ಅಬಕಾರಿ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ತಾಲೂಕಿನ ಸಮಗ್ರ ಅಭಿವೃದ್ಧಿ ಬಗ್ಗೆ ಮಾಹಿತಿ ಕಲೆಹಾಕಿದ ಶಾಸಕ ಡಾ ಮಂತರ್ ಗೌಡ ಮಾರ್ಚ್ ತಿಂಗಳ ಅಂತ್ಯದೊಳಗೆ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಹಾಡಿಗಳಿಗೆ ಭೇಟಿ ನೀಡಲಾಗುವುದು ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

೨೦೨೫ ಜನವರಿ ಅಂತ್ಯದವರೆಗಿನ ವಿವಿಧ ಇಲಾಖೆಗಳ ಪ್ರಗತಿ ಬಗ್ಗೆ ಸುಮಾರು ೨೫ಕ್ಕೂ ಅಧಿಕ ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕರು ಮಾಹಿತಿ ಸಂಗ್ರಹಿಸಿದರು. ಸಭೆಗೆ ಗೈರಾದ ಅಧಿಕಾರಿಗಳಿಗೆ ತಕ್ಷಣ ನೋಟೀಸ್ ನೀಡಿ ಕ್ರಮ ಕೈಗೊಳ್ಳುವಂತೆ ಶಾಸಕರು ಸಭೆಯಲ್ಲಿ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರ್ ಕುಮಾರ್, ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಮತ್ತು ಕೆಡಿಪಿ ಸದಸ್ಯರು ಅಧಿಕಾರಿಗಳು ಇದ್ದರು.