ನಾಪೋಕ್ಲು, ಫೆ. ೧೨: ವಿದ್ಯಾರ್ಥಿಗಳು ನಿರಂತರವಾದ ಅಧ್ಯಯನ ಮತ್ತು ಪರಿಶ್ರಮದಿಂದ ಮಾತ್ರ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಬೆಂಗಳೂರು ಗೌಡ ಸಮಾಜದ ಅಧ್ಯಕ್ಷ ಕೇಕಡ ನಾಣಯ್ಯ ಹೇಳಿದರು.
ಚೇರಂಬಾಣೆ ಅರುಣ ವಿದ್ಯಾ ಸಂಸ್ಥೆಯಲ್ಲಿ ಓಜಸ್ವಿ ಚೈತನ್ಯ ಫೌಂಡೇಶನ್ ವತಿಯಿಂದ ಕೊಡಗು ಗೌಡ ಸಮಾಜ ಬೆಂಗಳೂರು ಇದರ ಸಹಭಾಗಿತ್ವದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ “ನಾನು ಮತ್ತು ನನ್ನ ಭವಿಷ್ಯ” ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು .
ವಿದ್ಯಾರ್ಥಿಗಳು ಜೀವನದಲ್ಲಿ ಯಾವುದೇ ವ್ಯಸನಕ್ಕೆ ಬಲಿಯಾಗದೆ ಸಮಾಜ ಮತ್ತು ದೇಶದ ಹಿತವನ್ನು ಕಾಪಾಡುವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಸಮಾರಂಭದಲ್ಲಿ ಬೆಂಗಳೂರು ಗೌಡ ಸಮಾಜದ ಉಪಾಧ್ಯಕ್ಷ ಅಯ್ಯಟಿರ ಮೋಹನ್ ಹಾಗೂ ಬೇಕಲ್ ಬಿಪಿನ್, ಅಳಮಂಡ ಮೋಹನ್ ದೇವಯ್ಯ, ಅರುಣ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪಿ.ಎಸ್. ಸುಬ್ಬಯ್ಯ, ಬೋಧಕರು, ಸಿಬ್ಬಂದಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಓಜಸ್ವಿ ಚೈತನ್ಯ ಫೌಂಡೇಶನ್ ಸಂಪನ್ಮೂಲ ವ್ಯಕ್ತಿಗಳಾದ ಡಾ. ಕವಿತಾ, ಬ್ರಿಜೇಶ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಿ.ಎಸ್. ರಾಮಕೃಷ್ಣ ಸ್ವಾಗತಿಸಿ, ಅಧ್ಯಾಪಕಿ ಸುಷ್ಮಾ ನಿರೂಪಿಸಿ, ಮುಖ್ಯ ಶಿಕ್ಷಕ ಸಿ.ಆರ್. ಲೋಕೇಶ್ ವಂದಿಸಿದರು.