ನಾಪೋಕ್ಲು, ಫೆ. ೧೨: ಪೆರಾಜೆಯ ಕುಂಬಳಚೇರಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇದರ ಜ್ಞಾನದೀಪ ಕಾರ್ಯಕ್ರಮದಡಿಯಲ್ಲಿ ಬೆಂಚು - ಡೆಸ್ಕ್ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ವಿನಯ ಕುಮಾರ್ ನಿಡ್ಡಿಲ್, ಶಾಲಾ ಮುಖ್ಯೋಪಾಧ್ಯಾಯ ರಾಜು, ಗ್ರಾಮ ಪಂಚಾಯಿತಿ ಸದಸ್ಯ ಪ್ರವೀಣ್ ಮಜಿಕೋಡಿ, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಜಯರಾಮ ಎನ್.ಬಿ., ಪೆರಾಜೆ ಒಕ್ಕೂಟದ ಅಧ್ಯಕ್ಷ ರೋಹಿತಾಶ್ವ ನಿಡ್ಯಮಲೆ, ಕಾರ್ಯದರ್ಶಿ ವನಿತಾ ನಿಡ್ಯಮಲೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪಾಜೆ ವಲಯ ಮೇಲ್ವಿಚಾರಕ ಸಂತೋಷ್ ಎ.ಓ., ಸೇವಾ ಪ್ರತಿನಿಧಿ ಕವಿನ, ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.