ಮಡಿಕೇರಿ, ಫೆ. ೧೩: ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುರಕ್ಷಿತ ಅಂತರ್ಜಾಲ ದಿನ (sಚಿಜಿeಡಿ iಟಿಣeಡಿಟಿeಣ ಜಚಿಥಿ) ಕಾರ್ಯಕ್ರಮ ನಡೆಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಉದ್ಘಾಟಿಸಿ ಮಾತನಾಡಿ, ಸುರಕ್ಷಿತ ಅಂತರ್ಜಾಲ ದಿನದ ಬಗ್ಗೆ ಮಾಹಿತಿಯನ್ನು ನೀಡಿದರು. ಎನ್‌ಐಸಿ ಅಧಿಕಾರಿಗಳಾದ ಸಿಂಧೂರ ತಳವಾರ ಅವರು ಸುರಕ್ಷಿತ ಇಂಟರ್ನೆಟ್ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಅಧಿಕಾರಿಗಳು ಹಾಗೂ ಆಡಳಿತ ಸಿಬ್ಬಂದಿಗಳು ಭಾಗಿಯಾಗಿದ್ದರು ಮತ್ತು ಎನ್‌ಐಸಿ ಸಿಬ್ಬಂದಿಗಳು ಭಾಗಿಯಾಗಿದ್ದರು.