ಮುಳ್ಳೂರು, ಫೆ. ೧೩: ಸಮೀಪದ ಗುಡುಗಳಲೆ ಜಾತ್ರಾ ಮೈದಾನದಲ್ಲಿ ೮೧ನೇ ಗುಡುಗಳಲೆ ಜಯದೇವ ಜಾನುವಾರುಗಳ ಜಾತ್ರೆಯ ಅಂಗವಾಗಿ ಕಬಡ್ಡಿ ಪಂದ್ಯಾವಳಿ ಸಮಿತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.

ಕಬಡ್ಡಿ ಪಂದ್ಯಾವಳಿಯಲ್ಲಿ ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು. ಗೋಪಾಲಪುರ ರೋಹಿತ್ ಫ್ರೆಂಡ್ಸ್ ತಂಡ ದ್ವಿತೀಯ ಸ್ಥಾನ ಹಾಗೂ ಕಿತ್ತೂರು ಬಾಯ್ಸ್ ತಂಡ ತೃತೀಯ ಸ್ಥಾನ ಪಡೆದುಕೊಂಡಿತು.

ಶನಿವಾರಸAತೆ ಮತ್ತು ಗೌಡಳ್ಳಿ ದೈಹಿಕ ಶಿಕ್ಷಣ ಶಿಕ್ಷಕರಾದ ಆದರ್ಶ್ ಮತ್ತು ಪ್ರವೀಣ್ ಕಬಡ್ಡಿ ಪಂದ್ಯಾಟವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಬಡ್ಡಿ ಪಂದ್ಯಾವಳಿ ಸಮಿತಿ ಅಧ್ಯಕ್ಷ ವಿನಯ್, ಕಾರ್ಯದರ್ಶಿ ಉಷಾ, ಉದ್ಯಮಿಗಳಾದ ಮಧು ಬಾಗೇರಿ, ಸುದರ್ಶನ್ ಮುಂತಾದವರು ಹಾಜರಿದ್ದರು.