ಶನಿವಾರಸಂತೆ, ಫೆ. ೧೨: ಸಮೀಪದ ಬೆಂಬಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆ ಚಿಣ್ಣರ ಉತ್ಸವ ಸಮಾರಂಭ ನಡೆಯಿತು.
ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ಶಾಲೆ ಚಿಣ್ಣರ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಮೇದಪ್ಪ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಉಚಿತ ಸೌಲಭ್ಯ ಗಳೊಂದಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಸದುಪಯೋಗ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದು ಸಲಹೆ ನೀಡಿದರು.
ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಸದಸ್ಯ ಬಿ.ಕೆ. ದಿನೇಶ್ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಭವಿಷ್ಯವನ್ನು ಉಜ್ವಲವಾಗಿಸುವತ್ತ ಕನಸನ್ನು ಕಾಣುವಂತಾಗಬೇಕು ಮತ್ತು ಕಂಡAತಹ ಕನಸನ್ನು ನನಸು ಮಾಡುವತ್ತ ಗಮನಹರಿಸಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಣ ಸಂಘದ ಕೊಡಗು ಘಟಕದ ಅಧ್ಯಕ್ಷ ಹೆಚ್.ಎನ್. ಮಂಜುನಾಥ್ ಮಾತನಾಡಿ, ಸರ್ಕಾರಿ ಶಾಲೆಯು ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಸಮಾಜದ ಉತ್ತಮ ಸತ್ಪçಜೆಯನ್ನಾಗಿ ರೂಪಿಸುತ್ತದೆ. ಸರ್ಕಾರಿ ಶಾಲೆಯಲ್ಲಿ ಬಿಸಿ ಊಟ, ಉಚಿತ ಸಮವಸ್ತç, ಪಠ್ಯ ಪುಸ್ತಕ, ಬೈಸಿಕಲ್, ವಿದ್ಯಾರ್ಥಿ ವೇತನ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕ ಡಿ.ಎಲ್. ಮೂರ್ತಿ ಮಾತನಾಡಿದರು. ಶಿಕ್ಷಕಿ ಬಿ.ಕೆ. ಕುಸುಮ ಶಾಲಾ ವರದಿ ವಾಚಿಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ದೊಡ್ಡಯ್ಯ, ವಿನೋದ, ಸಿ.ಆರ್.ಪಿ. ರವೀಶ್, ತ್ಯಾಗರಾಜ ಕಾಲೋನಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪುಟ್ಟಸ್ವಾಮಿ, ಬ್ಯಾಟಗೊಟ್ಟ ಶಾಲಾ ಮುಖ್ಯ ಶಿಕ್ಷಕಿ ಭಾಗ್ಯ, ಶಿಕ್ಷಕರಾದ ಎಚ್.ಆರ್. ಮಲ್ಲೇಶ್, ಮುಜಾಮಿಲ್ ಅಖ್ತರ್, ಫಯಾಜ್, ಮುರುಳಿ, ತೇಜಾವತಿ, ಕವಿತಾ, ಚಂದ್ರಶೇಖರ್ ಅಡ್ಮನಿ, ದೈಹಿಕ ಶಿಕ್ಷಣ ಶಿಕ್ಷಕ ಎ.ಪಿ. ಸುನಿಲ್ ಮತ್ತಿತರರು ಉಪಸ್ಥಿತರಿದ್ದರು. ರಶ್ಮಿತಾ ವಂದಿಸಿದರು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.