ಮಡಿಕೇರಿ, ಫೆ. ೧೩: ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸರ್ಕಾರದ ವಿಶೇಷ ಅತಿಥಿಯಾಗಿ ಭಾಗವಹಿಸಿ, ಮರಳಿ ಗ್ರಾಮಕ್ಕೆ ಬಂದಿರುವ ಹೊದ್ದೂರು ಗ್ರಾಮ ಪಂಚಾಯಿತಿ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ ಕೊಟ್ಟಮುಡಿ ಅವರನ್ನು ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಮತ್ತು ಅಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ಕುಮಾರ ಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸುಮತಿ, ಬಾಲ ಕಾರ್ಮಿಕ ಅಧಿಕಾರಿ ಸಿರಾಜ್, ಮೂರ್ನಾಡು ಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್, ಹೊದ್ದೂರು ಗ್ರಾಮ ಪಂಚಾಯಿತಿ ಪಿ.ಡಿ.ಓ. ಅಬ್ದುಲ್ಲಾ ಮತ್ತು ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.