ಮಡಿಕೇರಿ, ಫೆ. ೧೩: ರಾಜ್ಯದಲ್ಲಿ ಕಳೆದ ೨ ವರ್ಷಗಳ ಹಿಂದೆ ಆರಂಭಗೊAಡ ಹೊಸ ವಿಶ್ವವಿದ್ಯಾನಿಲಯಗಳ ನಿರ್ವಹಣೆಗೆ ಎದುರಾಗಿರುವ ಆರ್ಥಿಕ ಸಮಸ್ಯೆಯ ಕುರಿತು ಚರ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಸಚಿವ ಸಂಪುಟ ಉಪಸಮಿತಿ ಸಭೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು.
ಕೊಡಗು ಜಿಲ್ಲೆಯ ಚಿಕ್ಕಅಳುವಾರದಲ್ಲಿರುವ ಕೊಡಗು ವಿಶ್ವವಿದ್ಯಾನಿಲಯ ಸೇರಿದಂತೆ ರಾಜ್ಯದ ೭ ಕಡೆಗಳಲ್ಲಿ ಹೊಸ ವಿಶ್ವವಿದ್ಯಾನಿಲಯಗಳು ಸ್ಥಾಪನೆಯಾಗಿವೆ. ಆದರೆ, ಸರಕಾರದಿಂದ ಅನುದಾನ ದೊರೆಯದೆ ನಿರ್ವಹಣೆ ಕಷ್ಟ ಸಾಧ್ಯವಾಗಿರುವ ಕುರಿತು ಸರಕಾರದ ಗಮನಕ್ಕೆ ಬಂದ ಹಿನ್ನೆಲೆ ಮುಂದಿನ ನಿರ್ಧಾರ ಕೈಗೊಳ್ಳುವ ಕುರಿತು ಸಾಧಕ-ಬಾಧಕ ಸಭೆಯನ್ನು ನಡೆಸಲಾಯಿತು. ಸಂಬAಧಪಟ್ಟ ಅಧಿಕಾರಿಗಳು ಈ ಕುರಿತು ಸಭೆಗೆ ಮಾಹಿತಿ ಒದಗಿಸಿದರು. ಸಭೆಯಲ್ಲಿ ಕೈಗೊಂಡ ನಿರ್ಣಯ ಗೌಪ್ಯವಾಗಿದ್ದು, ಸರಕಾರ ತನ್ನ ನಿಲುವನ್ನು ಬಹಿರಂಗೊಳಿಸಿದ ನಂತರವಷ್ಟೆ ಹೊಸ ವಿಶ್ವವಿದ್ಯಾನಿಲಯಗಳ ಭವಿಷ್ಯ ಗೊತ್ತಾಗಲಿದೆ.
ಸಭೆಯಲ್ಲಿ ಸಚಿವರಾದ ಎಚ್.ಕೆ. ಪಾಟೀಲ್, ಎಚ್.ಸಿ. ಮಹದೇವಪ್ಪ, ಡಾ ಶರಣ ಪ್ರಕಾಶ್ ಪಾಟೀಲ್, ಕೃಷ್ಣ ಬೈರೇಗೌಡ, ಡಾ ಎಂ.ಸಿ. ಸುಧಾಕರ್ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.