ಮುಳ್ಳೂರು, ಫೆ. ೧೪: ಮರ ತೆರವುಗೊಳಿಸದ ಅರಣ್ಯ ಇಲಾಖೆ ಕ್ರಮ ಖಂಡಿಸಿ ತಾ. ೧೫ರಂದು (ಇಂದು) ಇಲಾಖೆಯ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ದುಂಡಳ್ಳಿ, ಬಿಳಹ, ಯಸಳೂರು ರಸ್ತೆ ಅಗಲೀಕರಣ ಕಾಮಗಾರಿ ಕಾರ್ಯಕ್ಕೆ ಅರಣ್ಯ ಇಲಾಖೆ ರಸ್ತೆ ಬದಿಯ ಮರಗಳನ್ನು ತೆರವುಗೊಳಿಸದಿದ್ದ ಕಾರಣ ಕಾಮಗಾರಿ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ೧೫ ದಿನಗಳ ಹಿಂದೆ ದುಂಡಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು, ಸಾರ್ವಜನಕರು ಶನಿವಾರಸಂತೆ ಆರ್‌ಎಫ್‌ಓ ಕಚೇರಿಗೆ ಮುತ್ತಿಗೆ ಹಾಕಿದ್ದರು. ಸಾರ್ವಜನಿಕರ ಪ್ರತಿಭಟನೆ ಮೇರೆ ಅರಣ್ಯ ಇಲಾಖೆ ಅಧಿಕಾರಿಗಳು ಒಂದು ವಾರದಲ್ಲಿ ಮರ ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರು. ಆದರೆ ಪ್ರತಿಭಟನಾಕಾರರು ಗಡುವು ನೀಡಿ ೧೫ ದಿನಗಳಾದರೂ ಅರಣ್ಯ ಇಲಾಖೆಯವರು ಮರಗಳನ್ನು ತೆರವುಗೊಳಿಸಲು ಕ್ರಮತೆಗೆದುಕೊಳ್ಳದ ಹಿನ್ನೆಲೆಯಲ್ಲಿ ತಾ. ೧೫ ರಂದು (ಇಂದು) ಅರಣ್ಯ ಇಲಾಖೆ ಕಚೇರಿಗೆ ಬೀಗ ಹಾಕಿ ರಸ್ತೆ ತಡೆ ನಡೆಸಲಾಗುವುದೆಂದು ದುಂಡಳ್ಳಿ ಸುಬ್ರಮಣಿ, ಬಿಳಹ ನಾಗಣ್ಣ, ಎಸ್.ಎನ್. ರಘು ಪ್ರತಿಭಟನಾಕಾರರ ಪರವಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.