ಶನಿವಾರಸಂತೆ, ಫೆ. ೧೪: ತಾ. ೧೫ ರಂದು (ಇಂದು) ಮಧ್ಯಾಹ್ನ ೩ ಗಂಟೆಗೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ೧೫ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಸುಪ್ರಜ ಸೌರಭ ಕಾರ್ಯಕ್ರಮವನ್ನು ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಹಾಸನದ ಶ್ರೀ ಗುರು ರಾಘವೇಂದ್ರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಹಾಗೂ ಸಮಾಜ ಸೇವಕಿ ಮಮತಾ ಶಿವು ಅವರು ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಜ್ಯ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಅಧ್ಯಕ್ಷರು ಹಾಗೂ ಸಾಹಿತಿ ಕೊಟ್ರೇಶ್ ಎಸ್. ಉಪ್ಪಾರ್ ಅವರು ಭಾಗವಹಿಸಲಿದ್ದಾರೆ. ಸುಪ್ರಜ ಗುರುಕುಲ ಸಂಸ್ಥೆಯ ಕಾರ್ಯದರ್ಶಿ ಸುಮನಾರಾಣಿ ಅವರ ಉಪಸ್ಥಿತಿಯಲ್ಲಿ ಸುಪ್ರಜ ಗುರುಕುಲ ಸಂಸ್ಥೆಯ ಪ್ರಾಂಶುಪಾಲೆ ಹಾಗೂ ಅಧ್ಯಕ್ಷರಾದ ಡಿ ಸುಜಲಾದೇವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ೨೦೨೪ - ೨೫ ನೇ ಶೈಕ್ಷಣಿಕ ಸಾಲಿನ ವರ್ಷವಿಡಿ ನಡೆದ ವಿವಿಧ ಸ್ಪರ್ಧೆಗಳ ಹಾಗೂ ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿವಿಧ ಕ್ರೀಡಾ ಕ್ರೀಡೆಗಳ ಬಹುಮಾನಗಳ ವಿತರಣೆ ಹಾಗೂ ಪೋಷಕರಿಗಾಗಿ ನಡೆದ ಕ್ರೀಡೆಗಳ ಬಹುಮಾನಗಳ ವಿತರಣೆ ವಿವಿಧ ವಾರ್ಷಿಕ ಪ್ರಶಸ್ತಿಗಳ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.