ಶನಿವಾರಸಂತೆ, ಫೆ. ೧೮: ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ದೃಢತೆಗೆ ಕ್ರೀಡೆ ಪರಿಣಾಮಕಾರಿ ಯಾಗುತ್ತದೆ ಎಂದು ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ಜಗನ್‌ಪಾಲ್ ಅಭಿಪ್ರಾಯಪಟ್ಟರು. ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜು ಮತ್ತು ರಾಷ್ಟಿçÃಯ ಸೇವಾ ಯೋಜನೆ ಘಟಕ ಹಾಗೂ ನೆಹರು ಯುವ ಕೇಂದ್ರ ವತಿಯಿಂದ ಭಾರತಿ ವಿದ್ಯಾಸಂಸ್ಥೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪದವಿಪೂರ್ವ ವಿದ್ಯಾರ್ಥಿಗಳ ತಾಲೂಕುಮಟ್ಟದ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸದಾ ಪಠ್ಯ ಚಟುವಟಿಕೆಯ ಒತ್ತಡದಲ್ಲಿರುತ್ತಾರೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಕ್ರೀಡೆ ಮುಂತಾದ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ವೃದ್ಧಿಸಿಕೊಳ್ಳುವಂತೆ ಸಲಹೆ ನೀಡಿದರು.

ರಾಷ್ಟಿçÃಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಎಂ.ಎನ್. ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಸಮೀಪಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಓದಿಗೆ ಸಮಸ್ಯೆಯಾಗದಂತೆ ಒಂದು ದಿನದ ಕ್ರೀಡಾಕೂಟವನ್ನು ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಳ್ಳ ಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಮಹಮ್ಮದ್ ಪಾಷ, ನಿರ್ದೇಶಕ ಆನಂದ್, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಇ.ಎಂ. ದಯಾನಂದ್, ಉಪನ್ಯಾಸಕರಾದ ಮೋಹನ್, ಸುರೇಂದ್ರ, ಶೋಭ, ಪ.ಪೂ. ಕಾಲೇಜು ಪ್ರಾಂಶುಪಾಲ ಅಶೋಕ್, ಉಪನ್ಯಾಸಕ ಸೋಮಶೇಖರ್, ದೈಹಿಕ ಶಿಕ್ಷಣ ಶಿಕ್ಷಕರಾದÀ ಪವನ್, ಆದರ್ಶ್, ವಿಘ್ನೇಶ್ವರ ಬಾಲಕಿಯರ ಪ.ಪೂ. ಕಾಲೇಜಿನ ಉಪನ್ಯಾಸಕ ಸರ್ಪರಾಜ್ ಅಹಮ್ಮದ್ ಮುಂತಾದವರಿದ್ದರು.

ಬಾಲಕರಿಗೆ ವಾಲಿಬಾಲ್, ಬಾಲಕಿಯರಿಗೆ ಹಗ್ಗಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವೈಯಕ್ತಿಕ ಕ್ರೀಡೆಯಲ್ಲಿ ಬಾಲಕರಿಗೆ ಬ್ಯಾಡ್‌ಮಿಂಟನ್ ಮತ್ತು ನಿಂಬೆಹಣ್ಣು ಚಮಚ ನಡಿಗೆ ಸ್ಪರ್ಧೆ ಹಾಗೂ ಬಾಲಕಿಯರಿಗೆ ೧೦೦ ಮೀಟರ್ ಓಟ ಮತ್ತು ಸ್ಲೋ ಸೈಕ್ಲಿಂಗ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.