ಮಡಿಕೇರಿ, ಫೆ. ೧೮: ನಗರದ ವಿವಿಧ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸ್ವೆಟರ್‌ಗಳನ್ನು ವಿತರಿಸಿದರು.

ಬ್ಲಾಸಂ, ಮಿಷನ್ ಸ್ಕೂಲ್, ಹಿಂದೂಸ್ತಾನ್ ಶಾಲೆ, ಎ.ವಿ. ಶಾಲೆಯ ನೂರಾರು ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಿಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಕ್ತಾರ ಬಿ.ಕೆ. ಅರುಣ್‌ಕುಮಾರ್, ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ನಗರಸಭಾ ಸದಸ್ಯರುಗಳಾದ ಸವಿತಾ ರಾಕೇಶ್, ಶಾರದಾ ನಾಗರಾಜು, ಸಬಿತಾ, ಶ್ವೇತಾ ಪ್ರಶಾಂತ್, ಮಂಜುಳಾ ಸೇರಿದಂತೆ ಇನ್ನಿತರರು ಹಾಜರಿದ್ದರು.