ಮಡಿಕೇರಿ, ಫೆ. ೧೮: ಸಂತ ಮೈಕಲರ ಸಂಯುಕ್ತ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಸಂತ ಮೈಕಲರ ಶಾಲಾ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾಕ್ಟರ್ ರಾಘವ ಅವರು ಮಾತನಾಡಿ, ವಿದ್ಯಾರ್ಥಿಗಳು ಕನಸುಗಳನ್ನು ಕಂಡು ಅದನ್ನು ಸಾಕಾರಗೊಳಿಸುವತ್ತ ಪರಿಶ್ರಮ ಪಡಬೇಕು. ವಿದ್ಯಾರ್ಥಿಗಳು ಕಷ್ಟಪಟ್ಟು ಓದದೆ, ಇಷ್ಟಪಟ್ಟು ಓದಬೇಕು. ಶಿಸ್ತಿನಿಂದ ಇರುವ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಕಾಣುತ್ತಾರೆ ಎಂದರು.

ಸAತ ಮೈಕಲರ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ.ಫಾ. ಸಂಜಯ್ ಕುಮಾರ್ ಮಾತನಾಡಿ, ತಾಯಿಯ ತ್ಯಾಗ, ತಂದೆಯ ಬೆವರಿನ ಮಹತ್ವವನ್ನು ಅರಿತ ವಿದ್ಯಾರ್ಥಿಯು ಜೀವನದಲ್ಲಿ ಉನ್ನತಿಯ ಶಿಖರವನ್ನೇರುತ್ತಾರೆ. ಇತರರು ತಮ್ಮನ್ನು ಗುರುತಿಸುವಂತೆ ಸಮಾಜಕ್ಕೆ ಏನಾದರೂ ಕೊಡುಗೆ ಕೊಟ್ಟು ನೆನಪಿಟ್ಟುಕೊಳ್ಳುವಂತೆ ಮಾಡಬೇಕಾಗಿದೆ ಎಂದರು. ಈ ಸಂದರ್ಭ ಸಂಚಾಲಕರು ಹಾಡಿದ ಗೀತೆಯು ವಿದ್ಯಾರ್ಥಿಗಳ ಮನಸೂರೆಗೊಂಡಿತು. ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಕೆ.ಯಸ್. ಸುಮಂತ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ.ಎ. ಜಾನ್ಸನ್, ಸಿಸ್ಟರ್ ಸರಿತಾ ಮಾಡ್ತ, ಸಿಸ್ಟರ್ ಸಿಸಿಲಿಯಾ ಅವರುಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ರಾಬಿನ್ ಮತ್ತು ಕೇಶ್ಮಿಯ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಶಶಿರೇಖಾ ಸ್ವಾಗತಿಸಿ, ಫಾತಿಮಾ ರಿಫಾ ವಂದಿಸಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಸ್ಮರಣಿಕೆಯನ್ನು ನೀಡಲಾಯಿತು.