ವೀರಾಜಪೇಟೆ, ಫೆ. ೧೮: ವೀರಾಜ ಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸಿದರು.
ಆಸ್ಪತ್ರೆಯ ವಿವಿಧ ಕಾಮಗಾರಿಗಳಾದ ಆಧುನಿಕ ಶವಾಗಾರ, ಶುಶ್ರೂಷಕರ ಕೊಠಡಿ, ಹೆರಿಗೆ ವಾರ್ಡ್ಗೆ ತೆರಳುವ ರಸ್ತೆ, ಎಲೆಕ್ಟಿçಕಲ್ ವರ್ಕ್ ಸೇರಿದಂತೆ ರೂ. ೨ ಕೋಟಿ ೧೦ ಲಕ್ಷ ವೆಚ್ಚದಲ್ಲಿ ನಡೆಸಲಾಗುವ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಪೊನ್ನಣ್ಣ ಅವರು, ಆರೋಗ್ಯದ ಮಹತ್ವವನ್ನು ಇಂದು ಎಲ್ಲರೂ ಅರಿತುಕೊಳ್ಳಬೇಕು. ಹಾಗೆಯೇ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಅನುಕೂಲಕರ ವಾತಾವರಣ ಇರುವಂತೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ನಿಗಾವಹಿಸಬೇಕು ಎಂದರು.
ಈ ಸಂದರ್ಭ ವೀರಾಜಪೇಟೆ ತಾಲೂಕು ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ. ವಿಶ್ವನಾಥ್ ಸಿಂಪಿ, ತಾಲೂಕು ಆರೋಗ್ಯ ಅಧಿಕಾರಿ ಡಾ. ಯತಿರಾಜು, ಜಿಲ್ಲಾ ಆರೋಗ್ಯ ಅಧಿಕಾರಿ ಸತೀಶ್ ಕುಮಾರ್, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಪುರಸಭೆ ಅಧ್ಯಕ್ಷೆ ದೇಚಮ್ಮ, ಸದಸ್ಯರಾದ ರಾಜೇಶ್ ಪದ್ಮನಾಭ, ಎಸ್.ಹೆಚ್. ಮತೀನ್, ಸಿ.ಕೆ. ಪ್ರಥ್ವಿನಾಥ್, ಪುರಸಭಾ ಸದಸ್ಯರು, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಶಬೀರ್, ಮಂಜು, ಕಿಶೋರ್ ರಾಜು, ಶೀಭಾ ಪ್ರಥ್ವಿನಾಥ್, ಅನಿತಾ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕ ಆಸ್ಪತ್ರೆಯ ವೈದ್ಯರುಗಳು, ಶೂಶ್ರೂಷಕರು, ಕಚೇರಿ ಸಿಬ್ಬಂದಿಗಳು, ಪುರಸಭೆ ನಾಮನಿರ್ದೇಶಿತ ಸದಸ್ಯರಾದ ಜಿ.ಜಿ. ಮೋಹನ್, ಶಬರೀಶ್ ಶೆಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು ಸೇರಿದಂತೆ ಹಲವರು ಉಪಸ್ಥಿತರಿದ್ದರು.