ಮಡಿಕೇರಿ, ಫೆ. ೧೮: ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹಾದೇವರ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರವೇಶಕ್ಕೆ ನಿರ್ಬಂಧಿಸಿದ ಬೈಲಾಕ್ಕೆ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿ ಪ್ರವೇಶಕ್ಕೆ ಅವಕಾಶ ನೀಡಿರುವ ಹಿನ್ನೆಲೆ ಈ ಸಂಬAಧ ಮಾಹಿತಿ ಒದಗಿಸಲು ತಾಲೂಕು ಮ್ಯಾಜಿಸ್ಟೆçÃಟ್ ಆಗಿರುವ ತಹಶೀಲ್ದಾರ್ ಪ್ರವೀಣ್ ಸಭೆ ನಡೆಸಿದರು.
ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಉಚ್ಚ ನ್ಯಾಯಾಲಯ ನೀಡಿದ ಮಧ್ಯಂತರ ಆದೇಶದ ಬಗ್ಗೆ ತಿಳಿಸಿ ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯ ಪ್ರವೇಶಕ್ಕೆ ನ್ಯಾಯಾಲಯ ಅವಕಾಶ ನೀಡಿರುವ ಕಾರಣ ಮುಂದಿನ ತೀರ್ಪಿನ ತನಕ ಎಲ್ಲರೂ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ಕಾರಣಕ್ಕೂ ನ್ಯಾಯಾಂಗ ನಿಂದನೆಗೆ ಅವಕಾಶ ನೀಡಬಾರದು. ಗ್ರಾಮದಲ್ಲಿ ಶಾಂತಿ ಕಾಪಾಡಲು ಕೈಜೋಡಿಸಬೇಕೆಂದು ಹೇಳಿದರು.
ಮಡಿಕೇರಿ ಗ್ರಾಮಾಂತರ ಇನ್ಸ್ಪೆಕ್ಟರ್ ಚಂದ್ರಶೇಖರ್ ಮಾತನಾಡಿ, ಗ್ರಾಮದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೈಗೊಂಡಿರುವ ನಿಷೇಧಾಜ್ಞೆ ಮುಂದಿನ ಆದೇಶ ತನಕ ಯಥಾಸ್ಥಿತಿಯಲ್ಲಿರುವ ಕಾರಣ ಗುಂಪು ಸೇರಲು ಅವಕಾಶವಿರುವುದಿಲ್ಲ ಎಂದರು.
ದೇವಾಲಯ ಸಮಿತಿ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ಧನ್ ಅವರು ವೈಯಕ್ತಿಕ ಕಾರಣದಿಂದ ಸಭೆಗೆ ಗೈರಾಗಿದ್ದರು. ದೇವಾಲಯ ಸಮಿತಿ ಆಡಳಿತ ಮಂಡಳಿಯ ೧೩ ಮಂದಿ ಪೈಕಿ ಕೊಡವ ಹಾಗೂ ಕೊಡವÀ ಭಾಷಿಕ ಸಮುದಾಯದ ನಾಲ್ವರು ಮಾತ್ರ ಭಾಗವಹಿಸಿದ್ದರು. ಉಳಿದವರು ಸಭೆಗೆ ಹಾಜರಾಗಲಿಲ್ಲ. ಸಭೆ ಹಿನ್ನೆಲೆ ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು.
(ಮೊದಲ ಪುಟದಿಂದ) ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಬಿ.ಪಿ. ಚಿತ್ರಾ, ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ಗ್ರಾ.ಪಂ. ಸದಸ್ಯರು, ದೇವಾಲಯ ಸಮಿತಿಯ ಕಾರ್ಯದರ್ಶಿ ತೋರೆರ ಕಾಶಿ ಕಾರ್ಯಪ್ಪ, ಖಜಾಂಚಿ ತೋರೆರ ಪೂಣಚ್ಚ, ಉಪಕಾರ್ಯದರ್ಶಿ ಪರಿಯಪ್ಪಮ್ಮನ ಮಹೇಶ್, ಸದಸ್ಯ ನಂದೇಟಿರ ಕೆ. ಗಣಪತಿ ಸೇರಿದಂತೆ ಇನ್ನಿತರರು ಹಾಜರಿದ್ದರು.