ಮಡಿಕೇರಿ ಫೆ. ೧೯: ಕೊಡವ ಭಾಷೆಯನ್ನು ಸಂವಿಧಾನದ ೮ನೇ ಶೆಡ್ಯೂಲ್ಗೆ ಸೇರಿಸಬೇಕು ಎಂದು ಒತ್ತಾಯಿಸಿ ವಿಶ್ವ ರಾಷ್ಟç ಸಂಸ್ಥೆಯ ಅಂತರರಾಷ್ಟಿçÃಯ ಮಾತೃಭಾಷಾ ದಿನವಾದ ಫೆ.೨೧ ರಂದು (ನಾಳೆ) ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಗ್ಗೆ ೧೦.೩೦ ಗಂಟೆಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಹೇಳಿದ್ದಾರೆ.