ನಗರದ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ಯಪಡಿಸಿದರು. ಯಾವುದೇ ಕಾರಣಕ್ಕೂ ಕೊಡಗು ವಿವಿಯನ್ನು ಮುಚ್ಚಬಾರದು. ಸರಕಾರ ಸೂಕ್ತ
ಮಡಿಕೇರಿ, ಫೆ. ೧೮: ಕೊಡಗು ವಿಶ್ವವಿದ್ಯಾನಿಲಯ ಮುಚ್ಚುವ ಪ್ರಸ್ತಾಪವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕೊಡಗು ಜಿಲ್ಲಾ ಘಟಕ ವತಿಯಿಂದ ನಗರದ ಜ. ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ನಗರದ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ಯಪಡಿಸಿದರು. ಯಾವುದೇ ಕಾರಣಕ್ಕೂ ಕೊಡಗು ವಿವಿಯನ್ನು ಮುಚ್ಚಬಾರದು. ಸರಕಾರ ಸೂಕ್ತ ನಗರದ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ಯಪಡಿಸಿದರು. ಯಾವುದೇ ಕಾರಣಕ್ಕೂ ಕೊಡಗು ವಿವಿಯನ್ನು ಮುಚ್ಚಬಾರದು. ಸರಕಾರ ಸೂಕ್ತ ಅನುದಾನ ಒದಗಿಸಿ ಬಲವರ್ಧನೆಗೊಳಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
ವಿಭಾಗೀಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಮರಾಠಿ ಮಾತನಾಡಿ, ವಿಶ್ವವಿದ್ಯಾನಿಲಯ ಕೊಡಗು ಜಿಲ್ಲೆಯಲ್ಲಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಈ ಮೊದಲು ಶೈಕ್ಷಣಿಕವಾಗಿ ಸಮಸ್ಯೆ ಎದುರಾದಾಗ ೫-೬ ಗಂಟೆಗಳ ಕಾಲ ದೂರದ ಊರುಗಳಿಗೆ ಪ್ರಯಾಣಿಸಿ ಸರಿಪಡಿಸಿಕೊಂಡು ಬರಬೇಕಾದ ಸ್ಥಿತಿ ಇತ್ತು. ಕೊಡಗಿನಲ್ಲಿ ವಿವಿ ಸ್ಥಾಪನೆಯಿಂದಾಗಿ ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ ಸೃಷ್ಟಿಯಾಗಿದೆ. ರಾಜ್ಯ ಸರಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ವಿವಿಗಳ ನಿರ್ವಹಣೆಗೆ ಅನುದಾನ ನೀಡದಿರುವುದು ಖಂಡನೀಯ.
(ಮೊದಲ ಪುಟದಿಂದ) ಇದು ವಿದ್ಯಾರ್ಥಿ ವಿರೋಧಿ ನೀತಿ. ಬೇರೆ ಸೌಲಭ್ಯಗಳಿಗೆ ಹಣ ಒದಗಿಸುತ್ತಿರುವ ಸರಕಾರ ವಿವಿ ನಿರ್ವಹಣೆಗೆ ಹಣ ನೀಡದಿರುವುದು ಶೋಚನೀಯ ಸಂಗತಿಯಾಗಿದೆ. ರಾಜ್ಯ ಸರಕಾರ ವಿವಿ ಮುಚ್ಚಲು ಮುಂದಾದಲ್ಲಿ ಬೆಂಗಳೂರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ವಿದ್ಯಾರ್ಥಿ ಮನೋಜ್ ಮಾತನಾಡಿ, ಸರಕಾರದ ನಿಲುವು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಈ ಗೊಂದಲ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಉಪನ್ಯಾಸಕರ ಕೊರತೆಯನ್ನು ನೀಗಿಸಿ ಕಲಿಕೆಗೆ ಪೂರಕ ವಾತಾವರಣವನ್ನು ನಿರ್ಮಿಸಬೇಕು. ಕೆಲಸಕ್ಕೆ ಬಾರದ ಯೋಜನೆಗೆ ಹಣ ನೀಡುವ ಸರಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕಿಡಿಕಾರಿದರು.
ರಾಜ್ಯ ಕಾರ್ಯ ಸಮಿತಿ ಸದಸ್ಯ ಅಭಯ್, ಪ್ರಮೋದ್ ಪಲ್ಲೇದ ಸೇರಿದಂತೆ ಇನ್ನಿತರರು ಈ ಸಂದರ್ಭ ಹಾಜರಿದ್ದರು.