ಮಡಿಕೇರಿ, ಮಾ.೨೧ : ವಿಶ್ವಸಂಸ್ಥೆಯ ಅಂತರರಾಷ್ಟಿçÃಯ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನವಾದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ, ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯವನ್ನು ಮಂಡಿಸಿತು.
ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಅವರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಿದ ಸಂಘಟನೆಯ ಸದಸ್ಯರು ಕೊಡವರ ಪರವಾದ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಎನ್.ಯು. ನಾಚಪ್ಪ ಅವರು, ಸಿಎನ್‌ಸಿ ಸಂಘಟನೆ ಕಳೆದ ೩೫ ವರ್ಷಗಳಿಂದ ಸಂವಿಧಾನಬದ್ಧವಾದ ಬೇಡಿಕೆಗಳನ್ನು ಮುಂದಿಟ್ಟುಕೊAಡು ಶಾಂತಿಯುತವಾಗಿ ಹೋರಾಟ ನಡೆಸುತ್ತಿದೆ. ಖ್ಯಾತ ಅರ್ಥಶಾಸ್ತçಜ್ಞ, ಹಾರ್ವರ್ಡ್ ವಿದ್ವಾಂಸ ಡಾ. ಸುಬ್ರಮಣಿಯನ್ ಸ್ವಾಮಿ ಹಾಗೂ ಸಿಎನ್‌ಸಿ ಜಂಟಿಯಾಗಿ ಕರ್ನಾಟಕ ಹೈಕೋರ್ಟ್ನಲ್ಲಿ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಿದ್ದು, ಕಾನೂನುಬದ್ಧ ಬೇಡಿಕೆ ಈಡೇರುವ ವಿಶ್ವಾಸವಿದೆ ಎಂದು ಹೇಳಿದರು. ರೇಖಾ ನಾಚಪ್ಪ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ ಗಣಪತಿ, ಪಟ್ಟಮಾಡ ಕುಶ, ಅಜ್ಜಿಕುಟ್ಟಿರ ಲೋಕೇಶ್, ಬೊಟ್ಟಂಗಡ ಗಿರೀಶ್, ಅರೆಯಡ ಗಿರೀಶ್, ಮಂದಪAಡ ಮನೋಜ್, ಕಾಂಡೇರ ಸುರೇಶ್, ಕಾಟುಮಣಿಯಂಡ ಉಮೇಶ್, ಕಿರಿಯಮಾಡ ಶೆರಿನ್, ಕೂಪದಿರ ಸಾಬು, ಪುಟ್ಟಿಚಂಡ ಡಾನ್ ದೇವಯ್ಯ, ಬೇಪಡಿಯಂಡ ಬಿದ್ದಪ್ಪ, ಚೋಳಪಂಡ ನಾಣಯ್ಯ, ಮೇದುರ ಕಂಠಿ ನಾಣ್ಯಪ್ಪ, ಬೊಳ್ಳಜಿರ ಬಿ. ಅಯ್ಯಪ್ಪ, ಮೂಕೊಂಡ ದಿಲೀಪ್, ನಂದೆಟಿರ ರವಿ ಸುಬ್ಬಯ್ಯ, ಚಂಙAಡ ಚಾಮಿ ಪಳಂಗಪ್ಪ, ಪಾರ್ವಂಗಡ ನವೀನ್, ಅಪ್ಪೆಯಂಗಡ ಮಾಲೆ ಪೂಣಚ್ಚ, ಅಚ್ಚಕಾಳೆರ ರಮೇಶ್, ಅವರೆಮಾದಂಡ ರಮೇಶ್ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.