ಸಿದ್ದಾಪುರ, ಮಾ. ೨೨: ಕಾಡಾನೆಗಳನ್ನು ಕಾಡಿಗಟ್ಟುವ ಸಂದರ್ಭ ಕಾರ್ಯಾಚರಣೆ ತಂಡದ ಮೇಲೆ ಕಾಡಾನೆ ದಾಳಿಗೆ ಮುಂದಾಗಿದ್ದು, ಕೂದಲೆಳೆಯ ಅಂತರದಿAದ ಸಿಬ್ಬಂದಿ ಪಾರಾದ ಘಟನೆ ಶನಿವಾರ ನಡೆದಿದೆ. ತಿತಿಮತಿ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಬಾಡಗ ಬಾಣಂಗಾಲ ಗ್ರಾಮದ ವ್ಯಾಪ್ತಿಯ ಮಠ ಮೈಲಾದ್ಪುರ. ಪ್ಯಾರ್ಲ್ಯಾಂಡ್ ತೂಪನಕೊಲ್ಲಿ. ಹಾಗೂ ಚೆನ್ನಯ್ಯನ ಕೋಟೆ ಗ್ರಾಮದ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಕಾಫಿ ತೋಟಗಳಲ್ಲಿ ಬೀಡುಬಿಟ್ಟು ದಾಂಧÀಲೆ ನಡೆಸುತ್ತಿವೆ. ಅಲ್ಲದೆ ಕೃಷಿ ಫÀಸಲುಗಳನ್ನು ನಾಶಗೊಳಿಸುತ್ತಿದೆ. ಈ ಹಿನೆÀ್ನಲೆಯಲ್ಲಿ ಗ್ರಾಮಸ್ಥರು ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಅಟ್ಟುವಂತೆ ಒತ್ತಾಯಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿ ಕಾಫಿ ತೋಟದೊಳಗೆ ಕಾರ್ಯಾಚರಣೆಯನ್ನು ನಡೆಸಿದರು. ಕಾರ್ಯಾಚರಣೆಯ ಸಂದರ್ಭದಲ್ಲಿ ರೇಡಿಯೋ ಕಾಲರ್ ಅಳವಡಿಸಿದ ಉಷಾ, ದಕ್ಷ, ಮೀರ, ಗುಂಪಿನ ಕಾಡಾನೆಗಳು ಕಂಡುಬAದವು. ಕಾರ್ಯಾಚರಣೆ ಸಂದರ್ಭದಲ್ಲಿ ಗುಂಪಿನಲ್ಲಿದ್ದ ಕಾಡಾನೆಗಳು ಕಾರ್ಯಾಚರಣೆ ತಂಡದ ಸಿಬ್ಬಂದಿಗಳ ಮೇಲೆ ನಾಲ್ಕು ಬಾರಿ ದಾಳಿ ನಡೆಸಲು ಮುಂದಾಗಿದೆೆ. ಈ ಸಂದರ್ಭದಲ್ಲಿ ಅಪಾಯವನ್ನು ಅರಿತ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾಫಿ ತೋಟದೊಳಗೆ ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೂ ಛಲ ಬಿಡದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿ ಕಾಡಾನೆಗಳನ್ನು ಕಾಫಿ ತೋಟದಿಂದ ಓಡಿಸಿದರು. ಈ ಸಂದರ್ಭದಲ್ಲಿ ಮರಿಯಾನೆಗಳು ಸೇರಿದಂತೆ ೨೮ಕ್ಕೂ ಅಧಿಕ ಕಾಡಾನೆಗಳು ಕಂಡುಬAದವು ಎಂದು ಉಪ ವಲಯ ಅರಣ್ಯ ಅಧಿಕಾರಿ ಶಶಿ ತಿಳಿಸಿದ್ದಾರೆ.
ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಕಾರ್ಯಾಚರಣೆ ನಡೆಸಿ ಮಾಲ್ದಾರೆ ಅರಣ್ಯಕ್ಕೆ ಅಟ್ಟಲಾಯಿತು. ಆದರೆ ಗುಂಪಿನಿAದ ಬೇರ್ಪಟ್ಟ ಕೆಲವು ಕಾಡಾನೆಗಳು ಕಾಫಿ ತೋಟಗಳಲ್ಲಿ ಉಳಿದುಕೊಂಡಿವೆÉ. ಕಾರ್ಯಾಚರಣೆಯಲ್ಲಿ ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಹೆಚ್. ಜಗನ್ನಾಥ್ ಮಾರ್ಗದರ್ಶನದಲ್ಲಿ ಎ.ಸಿ.ಎಫ್. ಗೋಪಾಲ್ ಹಾಗೂ ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ನೇತೃತ್ವದಲ್ಲಿ ಉಪವಲಯ ಅಧಿಕಾರಿ ಶಶಿ ಪಿ.ಟಿ., ಆನೆಕಾರ್ಯಪಡೆ ವಲಯ ಅರಣ್ಯಾಧಿಕಾರಿ ದೇವರಾಜು, ಉಮಾಶಂಕರ್, ಅರಣ್ಯ ರಕ್ಷಕ ರಾಜೇಶ್ ಹಾಗೂ ಆನೆ ಕಾರ್ಯಪಡೆ ಸಿಬ್ಬಂದಿಗಳು ಮತ್ತು ಆರ್.ಆರ್.ಟಿ. ತಂಡದ ಸಿಬ್ಬಂದಿಗಳು ಪಾಲ್ಗೊಂಡಿದ್ದರು. -ವರದಿ: ವಾಸು